HomeKarnatakaಪ್ರಾಥಮಿಕ ಶಾಲೆ ದೈಹಿಕ ಶಿಕ್ಷಕರಿಗೆ ಗುಡ್ ನ್ಯೂಸ್: ಪ್ರೌಢಶಾಲೆ ಗ್ರೇಡ್ -1 ಹುದ್ದೆಗೆ ಬಡ್ತಿ: ಶಿಕ್ಷಣ...

ಪ್ರಾಥಮಿಕ ಶಾಲೆ ದೈಹಿಕ ಶಿಕ್ಷಕರಿಗೆ ಗುಡ್ ನ್ಯೂಸ್: ಪ್ರೌಢಶಾಲೆ ಗ್ರೇಡ್ -1 ಹುದ್ದೆಗೆ ಬಡ್ತಿ: ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರನ್ನು ಸರ್ಕಾರಿ ಪ್ರೌಢಶಾಲೆಗಳಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.

ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು. ರವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿ.ಪಿ.ಇಡಿ. ಪದವಿ ಪಡೆದ ದೈಹಿಕ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದು ರಾಜ್ಯಾದ್ಯಂತ ಹಲವಾರು ಪ್ರೌಢಶಾಲಾ ದೈಹಿಕ ಶಿಕ್ಷಕರ ಗ್ರೇಡ್-1 ಹುದ್ದೆಗಳು ಖಾಲಿ ಇದ್ದು, ಆದ್ದರಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಬಿ.ಪಿ.ಎಡ್. ಪದವಿ ಪಡೆದ ದೈಹಿಕ ಶಿಕ್ಷಕರಿಗೆ ಸರ್ಕಾರದ ನಿಯಮಾನುಸಾರ ಪ್ರೌಢಶಾಲಾ ದೈಹಿಕ ಶಿಕ್ಷಕರೆಂದು ಗ್ರೇಡ್-1 ಹುದ್ದೆಗಳಿಗೆ ಬಡ್ತಿ ನೀಡುವಂತೆ ಕೋರಿರುತ್ತಾರೆ.

ಮುಂದುವರೆದು, ಉಲ್ಲೇಖಿತ-(1)ರ ಜ್ಞಾಪನ ಪತ್ರದಲ್ಲಿ ಈಗಾಗಲೇ ಬಿ.ಪಿ.ಎಡ್, ವಿದ್ಯಾರ್ಹತೆ ಹೊಂದಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆ ಬಡ್ತಿ ನೀಡಲು ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಶೀಲಿಸಿ ಮುಂಬಡ್ತಿ ನೀಡಲು ಅಗತ್ಯ ಕ್ರಮವಹಿಸಲು ಸೂಚಿಸಲಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಲ್ಲೇಖಿತ-(2)ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ರವರು ಕೋರಿರುವಂತೆ ಉಲ್ಲೇಖ-(1)ರ ಪತ್ರದಲ್ಲಿ ಈಗಾಗಲೇ ಸೂಚಿಸಿರುವಂತೆ ಕೂಡಲೇ ಕ್ರಮವಹಿಸಿ ಹಾಗೂ ಕೈಗೊಂಡ ಕ್ರಮದ ಬಗ್ಗೆ ತುರ್ತಾಗಿ ವರದಿ ಸಲ್ಲಿಸಲು ಮರು ಆದೇಶಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular