ಬೆಂಗಳೂರು: ಜುಲೈ 12ರಂದು ಭಾನುವಾರವೂ ಎಂದಿನಂತೆ ರಾಜ್ಯದ ಎಲ್ಲಾ ಉಪ ನೋಂದಣಾಧಿಕಾರಿ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ.
ಹೌದು, ಕರ್ನಾಟಕದ ಎಲ್ಲಾ ಉಪ ನೋಂದಣಿ ಕಚೇರಿಗಳು ಭಾನುವಾರವೂ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ. ಹೆಚ್ಚುತ್ತಿರುವ ದಾಖಲಾತಿಗಳ ಒತ್ತಡವನ್ನು ನಿರ್ವಹಿಸಲು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯು ಈ ನಿರ್ಧಾರವನ್ನು ಕೈಗೊಂಡಿದೆ.
ಭಾನುವಾರ ರಜಾ ದಿನವಾಗಿದ್ದರೂ ಕೂಡ ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಯ ಉದ್ದೇಶದಿಂದ ಜುಲೈ 12ರಂದು ಭಾನುವಾರ ಎಲ್ಲಾ ಉಪ ನೋಂದಣಾಧಿಕಾರಿ ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ.
ಆಸ್ತಿ ನೋಂದಣಿ ಸೇರಿದಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ಸೇವೆಗಳನ್ನು ಸಾರ್ವಜನಿಕರು ಭಾನುವಾರವೂ ಎಂದಿನಂತೆ ಪಡೆದುಕೊಳ್ಳಬಹುದು ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮಾಹಿತಿ ನೀಡಿದೆ.

