ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : `ಕಾವೇರಿ 2.o’ ತಂತ್ರಾಂಶದಲ್ಲಿ ನೋಂದಣಿ ಇನ್ನಷ್ಟು ಸುಲಭ

ಬೆಂಗಳೂರು : ಆಸ್ತಿ ಖರೀದಿ, ಮಾರಾಟಗಾರರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕಾವೇರಿ 2.o ತಂತ್ರಾಂಶದ ಮೂಲಕ ಆಸ್ತಿ ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸಿದೆ.

ಆಸ್ತಿ ನೋಂದಣಿ ಸೇರಿದಂತೆ ಇತರೆ ಪ್ರಕ್ರಿಯೆಗಳಿಗೆ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯಿಲ್ಲದೆ ಆಸ್ತಿದಾರರೇ ಬಯಸಿದ ದಿನ, ಸಮಯಕ್ಕೆ ಆಸ್ತಿ ನೋಂದಣಿ ಮಾಡಿಕೊಳ್ಳುವ, ಆನ್‌ಲೈನ್‌ನಲ್ಲೇ ಶುಲ್ಕ ಪಾವತಿ ವ್ಯವಸ್ಥೆಯಿರುವ ‘ಕಾವೇರಿ 2.0’ ತಂತ್ರಾಂಶವು ಈಗಾಗಲೇ ಅಳವಡಿಕೆಯಾಗಿದೆ.

ರಾಜ್ಯದ 256 ಉಪನೋಂದಣಿ ಕಚೇರಿಗಳಲ್ಲಿ ಜೂ.25ರಿಂದ ಪೂರ್ಣ ಪ್ರಮಾಣದಲ್ಲಿ ಸುಧಾರಿತ ತಂತ್ರಾಂಶದಡಿಯೇ ನೋಂದಣಿ, ದಸ್ತವೇಜು ಕಾರ್ಯ ನಡೆದಿವೆ. ಒಂದೇ ದಿನ 15,936 ದಸ್ತವೇಜು ಪ್ರಕ್ರಿಯೆ ನಡೆದಿದ್ದು, ಬರೋಬ್ಬರಿ ₹158.28 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read