HomeKarnatakaಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ: ರಾಜ್ಯಾದ್ಯಂತ ಅರ್ಜಿ ತ್ವರಿತ ವಿಲೇವಾರಿ

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ: ರಾಜ್ಯಾದ್ಯಂತ ಅರ್ಜಿ ತ್ವರಿತ ವಿಲೇವಾರಿ

ಬೆಂಗಳೂರು: ರಾಜ್ಯದಾದ್ಯಂತ ಇ-ಸ್ವತ್ತು 2.0 ತಂತ್ರಾಂಶದಡಿ ಸ್ವೀಕರಿಸುತ್ತಿರುವ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದು, ಇಲ್ಲಿಯವರೆಗೂ ಒಟ್ಟು 1,40,719 ಅರ್ಜಿಗಳನ್ನು ಅನುಮೋದಿಸಿ, ವಿಲೇವಾರಿ ಮಾಡಲಾಗಿದೆ. ಹೊಸ ನಮೂನೆ 11ಬಿ ಅಡಿ ಈವರೆಗೆ 82,640 ಅರ್ಜಿಗಳು ಸ್ವೀಕೃತವಾಗಿದ್ದು, ವಿವಿಧ ಹಂತಗಳಲ್ಲಿ ಈ ಅರ್ಜಿಗಳು ಅನುಮೋದನೆಗೆ ಬಾಕಿ ಉಳಿದಿವೆ. ಸದರಿ ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen interface) ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಮತ್ತು ಬಳಕೆದಾರರು ಅರ್ಜಿಗಳನ್ನು ಅನುಮೋದನೆ ಮಾಡುವಂತಹ ಸಂದರ್ಭಗಳಲ್ಲಿ ಎದುರಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಆದಷ್ಟು ಪರಿಹರಿಸಲಾಗಿದೆ

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಈ ಕೆಳಗಿನ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸ ಬಡಾವಣೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ- ಈವರೆಗೆ 2,238 ಹೊಸ ಬಡಾವಣೆಗಳಿಗೆ ಅರ್ಜಿ ಸಲ್ಲಿಕೆಯಾಗಿದ್ದು, ಅವುಗಳಲ್ಲಿ 998 ಹೊಸ ಬಡಾವಣೆಗಳಿಗೆ ಗ್ರಾಮ ಪಂಚಾಯತಿ ಹಂತದಲ್ಲಿ ಅನುಮೋದನೆ ನೀಡಲಾಗಿದೆ.

ನಮೂನೆ–11ಬಿ ಖಾತೆಗಳನ್ನು ನಮೂನೆ–11ಎ ಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.

ಹೊಸ ಬಹುಮಹಡಿ (ಅಪಾರ್ಟ್‌ಮೆಂಟ್) ಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.

ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen Interface) ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಗುಂಟೆ ಮತ್ತು ಸೆಂಟ್ಸ್ ನಲ್ಲಿರುವ ವಿಸ್ತೀರ್ಣವನ್ನು ಚ.ಮೀ ನಲ್ಲಿ ಪರಿವರ್ತಿಸಿ, ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen Interface) ಮೂಲಕ ಅರ್ಜಿಗಳನ್ನು ಋಣಭಾರ ಪ್ರಮಾಣಪತ್ರಗಳನ್ನು (Encumbrance Certificate – EC) ಸಲ್ಲಿಸಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen Interface) ಮೂಲಕ ಅರ್ಜಿಗಳನ್ನು ಸೇವ್ (Save) ಮಾಡಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen Interface) ಮೂಲಕ ಇ-ಖಾತಾಗಳನ್ನು ಡೌನ್ಲೋಡ್ (download) ಮಾಡಿಕೊಳ್ಳಲು ಇದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ಫೇಸ್ (Citizen Interface) ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳೊಂದಿಗೆ ಮಾಡಲಾಗಿದ್ದ ಸಂಯೋಜನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

ಇ-ಸ್ವತ್ತು ತಂತ್ರಾಂಶದ ಗ್ರಾಮ ಪಂಚಾಯತಿ ಬಳಕೆದಾರರುಗಳ ಲಾಗಿನ್‌ನಲ್ಲಿ ಅರ್ಜಿಗಳ ಅನುಮೋದನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.

ಹೊರದೇಶದ ಅರ್ಜಿದಾರುಗಳಿಗೆ ಇ-ಸ್ವತ್ತು ತಂತ್ರಾಂಶದಲ್ಲಿ ಪಾಸ್‌ಪೋರ್ಟ್ (Passport) ಮೂಲಕ ಅರ್ಜಿಗಳನ್ನು ಸಲ್ಲಿಸಲು ಹಾಗೂ ಹೊಸ ಬದಲಾವಣೆಯಲ್ಲಿ ಇ-ಸ್ವತ್ತು ತಂತ್ರಾಂಶದ (Citizen Interface) ಮೂಲಕ ಅರ್ಜಿಗಳನ್ನು ಸಲ್ಲಿಸಲು ಮುಂದಿನ 10 ದಿನದೊಳಗೆ ಅವಕಾಶ ಕಲ್ಪಿಸಲಾಗುವುದು ಹಾಗೂ ಇ-ಸ್ವತ್ತು ತಂತ್ರಾಂಶದ ಬಳಕೆದಾರರ ಲಾಗಿನ್‌ನಲ್ಲಿ ಉಂಟಾಗುತ್ತಿರುವ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು.

ಬಹುಮುಖ್ಯವಾಗಿ ಸಾರ್ವಜನಿಕರು ಇ-ಸ್ವತ್ತು 2.0 ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ, ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಸ್ತುತ, ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ ಸಹಯೋಗದೊಂದಿಗೆ ಇ-ಸ್ವತ್ತು ಅರ್ಜಿಗಳನ್ನು ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳ ಮೂಲಕವೂ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular