HomeLive Newsಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆಸ್ತಿ ಕಣಜದಲ್ಲಿ ಕರಡು ಇ-ಖಾತಾ ಪ್ರಕಟ

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆಸ್ತಿ ಕಣಜದಲ್ಲಿ ಕರಡು ಇ-ಖಾತಾ ಪ್ರಕಟ

ಮನೆಯಲ್ಲಿಯೇ ಅತಿ ಸರಳವಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ, ನಿಗದಿತ ಕಾಲಾವಧಿಯಲ್ಲಿ ಇ-ಖಾತಾ ಸೇವೆಯನ್ನು ಪಡೆಯಲು ಸರ್ಕಾರವು ತಂತ್ರಾಂಶ ರೂಪಿಸಿದ್ದು, ಅದರಂತೆ ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿರುತ್ತದೆ. ಸಾರ್ವಜನಿಕರು ಈ ಮಾಹಿತಿಯನ್ನು ನೇರವಾಗಿ ವೀಕ್ಷಿಸಬಹುದಾಗಿದೆ. 

ಮಾಹಿತಿಗಳ ಬಗ್ಗೆ ತಕರಾರು ಇದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿನ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದಾಗಿದೆ. ನಮೂದಿಸಿದ ಮಾಹಿತಿಯ ನಿಖರತೆಯನ್ನು ನಗರಸಭೆಯು ಪರಿಶೀಲಿಸಿ ಅನುಮೋದಿಸಲಾಗುವುದು. ಅಂತಿಮ ಇ-ಖಾತಾವನ್ನು ಸಾರ್ವಜನಿಕರು ತಮ್ಮ ಮನೆಗಳಲ್ಲಿ ಕುಳಿತು ಪಡೆಯಬಹುದಾಗಿದೆ.  ಇ-ಖಾತಾ ಪಡೆಯಲು ಮಾಲೀಕರ ಭಾವಚಿತ್ರ, ಆಸ್ತಿ ತೆರಿಗೆ ಹಾಗೂ ನೀರಿನ ಕರದ ಚಲನ್, ಸ್ವತ್ತಿನ ದಾಖಲೆಗಳು ಕ್ರಯಪತ್ರ, ದಾನಪತ್ರ, ಹಕ್ಕು ಬಿಡುಗಡೆ ಪತ್ರ, ವಾರಸಾ ಪ್ರಮಾಣ ಪತ್ರ, ವಿದ್ಯುತ್ ಆರ್.ಆರ್. ನಂಬರ್, ಸ್ವತ್ತಿನ ಛಾಯಾಚಿತ್ರ, ಋಣಭಾರ ನಮೂನೆ-15/16 (ಇಆ), ಆಧಾರ್ ಕಾರ್ಡ್ ಪ್ರತಿ, ಪಹಣಿ ಪತ್ರಿಕೆ, ಮ್ಯುಟೇಶನ ಪ್ರತಿ, ಸರ್ವೆ ನಕ್ಷೆ ಹಾಗೂ ಸ್ವತ್ತಿಗೆ ಸಂಬಂಧಿಸಿದ ಇತರೆ ಪೂರಕ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ಕರ್ನಾಟಕ-1 ಕೇಂದ್ರಗಳಲ್ಲಿ ಸಹ ನಾಗರೀಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9019788143, 9902061158, 7676701684, 8660686901, 9902599883  ವೆಬ್‌ಸೈಟ್ ವಿಳಾಸ  www.eaasti.karnataka.gov.in   ಅಥವಾ ನಗರಸಭೆಯ ಕಂದಾಯ ಶಾಖೆಯನ್ನು ಸಂಪರ್ಕಿಸಬಹುದು ಎಂದು ಕೊಪ್ಪಳ ನಗರಸಭೆ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular