HomeKarnatakaಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಶೀಘ್ರವೇ ಆನ್ಲೈನ್ ಖಾತಾ ತಿದ್ದುಪಡಿ ಸೌಲಭ್ಯ

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಶೀಘ್ರವೇ ಆನ್ಲೈನ್ ಖಾತಾ ತಿದ್ದುಪಡಿ ಸೌಲಭ್ಯ

ಬೆಂಗಳೂರು: ನಾಗರೀಕರಿಗೆ ಉತ್ತಮ ಸೇವೆ, ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶದಿಂದ ಶೀಘ್ರವೇ ಆನ್ಲೈನ್ ಖಾತಾ ತಿದ್ದುಪಡಿ ಸೌಲಭ್ಯ ಪರಿಚಯಿಸಲಾಗುವುದು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದ್ದಾರೆ.

ಈ ಸೌಲಭ್ಯದಿಂದ ನಾಗರಿಕರು ತಮ್ಮ ಖಾತಾ ವಿವರಗಳಲ್ಲಿನ ದೋಷಗಳನ್ನು ಯಾವುದೇ ವಿಳಂಬವಿಲ್ಲದೆ ಸುಲಭವಾಗಿ ತಿದ್ದಿಕೊಳ್ಳಲು ಸಾಧ್ಯವಾಗಲಿದೆ. ಇದರಿಂದ ವ್ಯವಸ್ಥೆ ಹೆಚ್ಚು ಪರಿಣಾಮಕಾರಿ, ಪಾರದರ್ಶಕ ಮತ್ತು ಬಳಕೆದಾರ ಸ್ನೇಹಿಯಾಗಿ ರೂಪಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಮಾಲೀಕರ ಹೆಸರು ಮತ್ತು ಆಸ್ತಿಯ ಅಳತೆ ಹೊರತುಪಡಿಸಿ ಸ್ಥಳ, ವಾರ್ಡ್ ಸಂಖ್ಯೆ ಸೇರಿದಂತೆ ಇತರ ವಿವರಗಳನ್ನು ನಾಗರಿಕರು ತಿದ್ದುಪಡಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಸುಮಾರು 25 ಲಕ್ಷ ಡ್ರಾಫ್ಟ್ ಖಾತಾ ಅರ್ಜಿಗಳು ಆನ್ಲೈನ್ ಮೂಲಕ ಸಲ್ಲಿಕೆಯಾಗಿದ್ದು, ಅವುಗಳಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ನಾಗರಿಕರಿಗೆ ಈಗಾಗಲೇ ಅಂತಿಮ ಇ-ಖಾತಾ ನೀಡಲಾಗಿದೆ. ಎಲ್ಲಾ ದಾಖಲೆಗಳು ಸರಿಯಾಗಿದ್ದಲ್ಲಿ ಸರಾಸರಿ ಐದು ದಿನದೊಳಗೆ ಅಂತಿಮ ಇ-ಖಾತಾ ನೀಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮ್ಯುಟೇಷನ್ ಪ್ರಕ್ರಿಯೆಯಲ್ಲಿನ ವಿಳಂಬ ಕಡಿಮೆ ಮಾಡಲು ಸ್ವಯಂ ಚಾಲಿತ ಮ್ಯುಟೇಷನ್ ವ್ಯವಸ್ಥೆ ಜಾರಿಗೆ ತರಲಾಗಿದೆ. ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನಡೆದ ವಹಿವಾಟುಗಳು ಈಗ ಸ್ವಯಂ ಚಾಲಿತವಾಗಿ ಮ್ಯುಟೇಷನ್ ಆಗಲಿವೆ. ನೋಟಿಸ್ ಅವಧಿ ಪೂರ್ಣವಾದ ನಂತರ ಮ್ಯುಟೇಷನ್ ಪೂರ್ಣಗೊಳ್ಳುತ್ತದೆ. 7ನೇ ದಿನದ ನಂತರ ನಾಗರೀಕರಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular