HomeLatest Newsಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ

ಬೆಂಗಳೂರು: ನಗರದಲ್ಲಿರುವ ಎಲ್ಲಾ ಆಸ್ತಿಗಳ ದಾಖಲೆಗಳನ್ನು ಸ್ಕ್ಯಾನ್ ಮಾಡಿಸುತ್ತಿದ್ದು, ಜನರ ಮನೆ ಬಾಗಿಲಿಗೆ ಖಾತೆ ದಾಖಲೆ ತಲುಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಸೆಂಟ್ರಲ್ ಕಾಲೇಜು ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಮೃತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಈ ಭರವಸೆ ನೀಡಿದ್ದಾರೆ.

ನಗರದ ಹಲವು ಆಸ್ತಿಗಳು ಪೂರ್ವಜರ ಹೆಸರಿನಲ್ಲಿವೆ. ಕೆಲವರು ತಮ್ಮ ಹೆಸರಿಗೆ ಖಾತೆಗಳನ್ನು ಮಾಡಿಸಿಕೊಂಡಿಲ್ಲ. ಈ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೊಂದಿಗೆ ಚರ್ಚೆ ನಡೆಸಿದ್ದು, ವ್ಯವಸ್ಥಿತ ರೂಪಕ್ಕೆ ತರಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿ ನಾನು ಆಸ್ತಿಗಳ ದಾಖಲೆಗಳನ್ನು ಮಾಲೀಕರ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ಪ್ರಯತ್ನಿಸುತ್ತಿದ್ದೇನೆ. ಈಗಾಗಲೇ ಶೇಕಡ 60ರಷ್ಟು ಆಸ್ತಿಗಳ ಪರಿಶೀಲನೆ ಮುಗಿದಿದೆ. ಜನರ ಮನೆ ಬಾಗಿಲಿಗೆ ಆಸ್ತಿ ದಾಖಲೆ ತಲುಪಿಸಲಾಗುವುದು ಎಂದು ವಿವರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular