HomeKarnatakaಆಸ್ತಿ ಮಾರಾಟಗಾರರಿಗೆ ಗುಡ್ ನ್ಯೂಸ್ : ಇ-ಖಾತಾಗೆ ಪ್ರತ್ಯೇಕ ಸಹಾಯ ಕೇಂದ್ರ ಆರಂಭ.!

ಆಸ್ತಿ ಮಾರಾಟಗಾರರಿಗೆ ಗುಡ್ ನ್ಯೂಸ್ : ಇ-ಖಾತಾಗೆ ಪ್ರತ್ಯೇಕ ಸಹಾಯ ಕೇಂದ್ರ ಆರಂಭ.!

ಬೆಂಗಳೂರು : ಆಸ್ತಿ ಮಾರಾಟಕ್ಕಾಗಿ ತುರ್ತಾಗಿ ಇ-ಖಾತಾ ಅಗತ್ಯವಿರುವವರಿಗಾಗಿ ವಾರ್ಡ್ಗಳಲ್ಲಿ ಪ್ರತ್ಯೇಕ ಸಹಾಯ ಕೇಂದ್ರ ತೆರೆಯಲಾಗಿದೆ. ಕಂದಾಯ ಅಧಿಕಾರಿಗಳಿಗೆ ಎಲ್ಲ ರೀತಿಯ ದಾಖಲೆಗಳನ್ನು ನೀಡಿ ಇ-ಖಾತಾ ಪಡೆದುಕೊಳ್ಳಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಕಾವೇರಿ-2.0 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶ ಸಂಯೋಜನೆ ಮಾಡಲಾಗಿದ್ದು, ಅ. 7ರಿಂದ ರಾಜ್ಯಾದ್ಯಂತ ಇ-ಆಸ್ತಿ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿಯಾಗಿದೆ. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ. ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ದಿ:23/09/2024ರ ಸರ್ಕಾರದ ಆದೇಶದಂತೆ ಜಾರಿಯಾಗಿರುತ್ತದೆ.

2024ರ ಅಕ್ಟೋಬರ್ 07 ರಿಂದ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕೆಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular