
ಯಶವಂತಪುರ-ಬೆಳಗಾವಿ ಮಧ್ಯ 07389 ಸಂಖ್ಯೆಯ ರೈಲು ಸೆಪ್ಟೆಂಬರ್ 15 ರಂದು ಸಂಜೆ 6.15 ಕ್ಕೆ ಯಶವಂತಪುರದಿಂದ ಹೊರಟು ಸೆಪ್ಟೆಂಬರ್ 16 ರಂದು ಬೆಳಿಗ್ಗೆ 6 ಗಂಟೆಗೆ ಬೆಳಗಾವಿ ತಲುಪಲಿದೆ. ಬೆಳಗಾವಿ-ಯಶವಂತಪುರ 07390 ಸಂಖ್ಯೆಯ ರೈಲು ಸೆಪ್ಟೆಂಬರ್ 16ರಂದು ಸಂಜೆ 5.30 ಕ್ಕೆ ಬೆಳಗಾವಿಯಿಂದ ಹೊರಡಲಿದೆ ಮತ್ತು ಸೆಪ್ಟೆಂಬರ್ 17 ರಂದು ಬೆಳಿಗ್ಗೆ 4.30 ಕ್ಕೆ ಯಶವಂತಪುರ ತಲುಪಲಿದೆ.
ರೈಲು ಸಂಖ್ಯೆ 07391 ಸೆಪ್ಟೆಂಬರ್ 17 ರಂದು ಸಂಜೆ 6.15 ಕ್ಕೆ ಯಶವಂತಪುರದಿಂದ ಹೊರಟು ಸೆಪ್ಟೆಂಬರ್ 18 ರಂದು ಬೆಳಿಗ್ಗೆ 6 ಗಂಟೆಗೆ ಬೆಳಗಾವಿಯನ್ನು ತಲುಪಲಿದೆ. ರೈಲು ಸಂಖ್ಯೆ 07392 ಸೆಪ್ಟೆಂಬರ್ 18 ರಂದು ಸಂಜೆ 5.30 ಕ್ಕೆ ಬೆಳಗಾವಿಯಿಂದ ಹೊರಟು 19 ರಂದು ಬೆಳಿಗ್ಗೆ 4.30 ಕ್ಕೆ ಯಶವಂತಪುರ ತಲುಪಲಿದೆ ಎಂದು ಮೂಲಗಳು ತಿಳಿಸಿದೆ.

