HomeLatest Newsಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಯಾವ ರೇಷನ್ ಕಾರ್ಡನ್ನೂ ರದ್ದು ಮಾಡಲ್ಲ: ಸಚಿವ ಮುನಿಯಪ್ಪ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಯಾವ ರೇಷನ್ ಕಾರ್ಡನ್ನೂ ರದ್ದು ಮಾಡಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಯಾವ ಪಡಿತರ ಚೀಟಿಯನ್ನೂ ರದ್ದು ಮಾಡುವುದಿಲ್ಲ. ಅನರ್ಹರು ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್ ಗಳನ್ನು ಪರಿಷ್ಕರಿಸಿ ಎಪಿಎಲ್ ಕಾರ್ಡ್ ಗಳಾಗಿ ಪರಿವರ್ತಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಆಹಾರ ಇಲಾಖೆಯಿಂದ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಸಂದರ್ಭದಲ್ಲಿ ಅರ್ಹ ಬಿಪಿಎಲ್ ಫಲಾನುಭವಿಗಳು ಎಪಿಎಲ್ ಗೆ ಹೋದರೆ 24 ಗಂಟೆಯೊಳಗೆ ಸರಿಪಡಿಸಿಕೊಡುತ್ತೇವೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಿಪಿಎಲ್ ಕಾರ್ಡ್ ಪರಿಷ್ಕರಣಿ ನಡೆಸಲಾಗುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಯಾವ ಕಾರ್ಡನ್ನೂ ರದ್ದು ಮಾಡುವುದಿಲ್ಲ. ಅನರ್ಹರ ಕಾರ್ಡ್ ಗಳನ್ನು ಪರಿಷ್ಕರಿಸಿ ಎಪಿಎಲ್ ಗೆ ಸೇರ್ಪಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಹೊಂದಿರುವ ರಾಜ್ಯ ಕರ್ನಾಟಕ. ರಾಜ್ಯದಲ್ಲಿ ಶೇಕಡ 70ರಿಂದ 75ರಷ್ಟು ಬಿಪಿಎಲ್ ಕಾರ್ಡ್ ಗಳು ಇದ್ದು, ಬರೋಬ್ಬರಿ 1.17 ಕೋಟಿ ಅಧಿಕ ಬಿಪಿಎಲ್ ಕಾರ್ಡ್ ಗಳು ಇವೆ. ಹೀಗಾಗಿ ಪರಿಷ್ಕರಣೆ ಮಾಡಲೇಬೇಕಾದ ಅನಿವಾರ್ಯತೆ ಇದೆ ಎಂದರು.

ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ ಯೋಜನೆಯಡಿ ನೀಡಿರುವ ನಿಯಮಾವಳಿಗಳ ಪ್ರಕಾರ 7 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ತೆಗೆಯಬೇಕೆಂದು ಸೂಚಿಸಿದೆ. ಕೇಂದ್ರದ ಸರ್ಕಾರದ ಪರಿಷ್ಕರಣೆಯ ಪ್ರಕಾರ ಏನು ಮಾಡಬೇಕೆಂದು ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular