HomeKarnatakaಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : `ರೇಷನ್ ಕಾರ್ಡ್’ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯು ಮತ್ತೊಂದು ಸಿಹಿಸುದ್ದಿ ನೀಡಿದ್ದು, ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಮಾಡಿದೆ.

ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿಗೆ ಅಕ್ಟೋಬರ್ 19 ರಿಮದ 21 ರವರೆಗೆ ಅವಕಾಶ ನೀಡಿತ್ತು. ಆದರೆ ಸರ್ವರ್ ಸಮಸ್ಯೆಯಿಂದ ಬಹುತೇಕ ಪಡಿತರ ಕಾರ್ಡ್ ಗಳ ತಿದ್ದುಪಡಿ ಆಗಿಲ್ಲ. ಈ ಹಿನ್ನೆಲೆಯಲ್ಲಿ ನವೆಂಬರ್ 1 ರಿಂದ ಮತ್ತೊಮ್ಮೆ ಪಡಿತರ ಚೀಟಿಗಳ ತಿದ್ದುಪಡಿಗೆ ಅವಕಾಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಡಿತರ ಚೀಟಿಯಲ್ಲಿ ಹೆಸರು ತಪ್ಪಾಗಿದ್ದರೆ ಸರಿಪಡಿಸುವುದು, ಹೊಸ ಹೆಸರುಗಳು ಸೇರ್ಪಡೆ, ವಿಳಾಸ ಬದಲಾವಣೆ, ಪಡಿತರ ಚಿಟಿಗಳಲ್ಲಿನ ಕುಟುಂಬದ ಸದಸ್ಯರ ಹೆಸರು ತೆಗೆದು ಹಾಕುವುದು ಮೊದಲಾದ ತಿದ್ದುಪಡಿಗಳನ್ನು ಮಾಡಿಕೊಳ್ಳಲು ಆಹಾರ ಇಲಾಖೆಯು ನವೆಂಬರ್ 1 ರಿಂದ ಮತ್ತೊಮ್ಮೆ ಅವಕಾಶ ನೀಡಲು ಮುಂದಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular