
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಬೆಲೆ ನಿಗದಿ ವಿಚಾರವಾಗಿ ಮಾತುಕತೆ ನಡೆಯುತ್ತಿದೆ. ತೆಲಂಗಾಣ, ಆಂಧ್ರಪ್ರದೇಶ, ಛತ್ತೀಸ ಗಢ ಸರ್ಕಾರ ಮುಂದೆ ಬಂದಿವೆ. ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಆದಷ್ಟು ಬೇಗ ಹತ್ತು ಕೆಜಿ ಅಕ್ಕಿ ನೀಡುವ ಕೆಲಸ ಮಾಡುತ್ತೇವೆ . ಶೀಘ್ರವೇ 10 ಕೆಜಿ ಅಕ್ಕಿ ವಿತರಣೆ ಮಾಡಲಿದ್ದೇವೆ ಎಂದು ಸಚಿವ ಮುನಿಯಪ್ಪ ಹೇಳಿದರು.
ಬರ ಪೀಡಿತ ತಾಲೂಕುಗಳಿಗೆ ಹಣದ ಬದಲು 10 KG ಅಕ್ಕಿ ನೀಡಲಾಗುವುದು. 114 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಈ ತಾಲೂಕುಗಳಿಗೆ 10 ಕೆಜಿ ಅಕ್ಕಿ ವಿತರಣೆಗೆ ಸಿದ್ದತೆ ನಡೆಸಲಾಗುತ್ತಿದೆ ಎಂದರು.

