HomeLatest NewsRCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ರೆ ಉಚಿತ ಮೆಟ್ರೋ ಪ್ರಯಾಣ

RCB ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ರೆ ಉಚಿತ ಮೆಟ್ರೋ ಪ್ರಯಾಣ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳ ಟಿಕೆಟ್ ಹೊಂದಿರುವವರಿಗೆ ಉಚಿತವಾಗಿ ಮೆಟ್ರೋ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ.

ಬಿಎಂಆರ್‌ಸಿಎಲ್ ಜೊತೆಗೆ ಆರ್ಸಿಬಿ ಮ್ಯಾನೇಜ್ಮೆಂಟ್ ನಡೆಸಿದ ಮಾತುಕತೆ ಫಲಪ್ರದ ನಂತರ ಆರ್‌ಸಿಬಿ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಅಧಿಕೃತವಾಗಿ ಈ ಮಾಹಿತಿ ಹಂಚಿಕೊಂಡಿದೆ.

ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಉದ್ಘಾಟನಾ ಪಂದ್ಯವನ್ನಾಡಲಿದೆ. ಏಪ್ರಿಲ್ 5 ರಂದು ಚೆನ್ನೈ ವಿರುದ್ಧ ಪಂದ್ಯವನ್ನಾಡಲಿದೆ. ತವರಿನಲ್ಲಿ ಆರ್‌ಸಿಬಿ ಎರಡು ಪಂದ್ಯಗಳನ್ನು ಆಡಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಉಂಟಾಗುವ ಸಂಚಾರದಟ್ಟಣೆ ಕಡಿಮೆ ಮಾಡುವುದು ಮತ್ತು ಸಾರ್ವಜನಿಕ ಸಾರಿಗೆ ಬಳಕೆ ಉತ್ತೇಜಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular