HomeKarnatakaಓದುಗರಿಗೆ ಗುಡ್ ನ್ಯೂಸ್: ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳಿಗೆ ಆಗಸ್ಟ್ ಪೂರ್ತಿ 50% ರಿಯಾಯಿತಿ

ಓದುಗರಿಗೆ ಗುಡ್ ನ್ಯೂಸ್: ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳಿಗೆ ಆಗಸ್ಟ್ ಪೂರ್ತಿ 50% ರಿಯಾಯಿತಿ

ಧಾರವಾಡ :   ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ 2026ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ https://kpp.karnataka.gov.in (ಆನ್‍ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಶೇ.50 ರಿಯಾಯಿತಿ ಲಭ್ಯವಿದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃತಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 769 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಲ್ವಸಂಖ್ಯಾತ ಅಭ್ಯರ್ಥಿಗಳಿಂದ ಕರಾಮುವಿಯಲ್ಲಿ ಉಚಿತ ಪ್ರವೇಶಾತಿ

ಪದವಿ ಪೂರ್ವ, ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರುವ ಅಲ್ವಸಂಖ್ಯಾತ ಅಭ್ಯರ್ಥಿಗಳಿಂದ ಕರಾಮುವಿಯಲ್ಲಿ ಉಚಿತ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸಲು ಅಗಸ್ಟ್ 10, 2026 ರವರೆಗೆ ಅವಧಿ ವಿಸ್ತರಿಸಲಾಗಿದೆ.ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಮಂಜೂರಾಗುವ ಶುಲ್ಕ ಪಾವತಿ ಸೌಲಭ್ಯದಡಿ ಕರಾಮುವಿಯ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ, ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಸೇರ ಬಯಸುವ ಅಲ್ಪಸಂಖ್ಯಾತ ವರ್ಗದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬುದಿಸ್ಟ್ ಮತ್ತು ಪಾರ್ಸಿ) ಅರ್ಹ ಅಭ್ಯರ್ಥಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಂತರ್ಜಾಲ https://dom.karnataka.gov.in ದಲ್ಲಿರುವ ಕರಾಮುವಿಯ ಪ್ರವೇಶಾತಿ ಪೋರ್ಟಲ್ ಲಿಂಕ್ https://minority.ksouportal.com ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ, ನೇರವಾಗಿ ಅಗತ್ಯ ದಾಖಲಾತಿಗಳೊಂದಿಗೆ ಧಾರವಾಡದಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ ಪ್ರವೇಶಾತಿ ಪಡೆಯಬಹುದು.

ಅರ್ಹ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯೇ ಪೂರ್ಣ ಪ್ರವೇಶಾತಿ ಶುಲ್ಕ ಭರಿಸಲಿದ್ದು, ಹೆಚ್ಚಿನ ಮಾಹಿತಿಗಾಗಿ ನೂತನ ಕಛೇರಿ ವಿಳಾಸ: ಕರಾಮುವಿ, ಪ್ರಾದೇಶಿಕ ಕೇಂದ್ರ, ಧಾರವಾಡ., ಅಮರಗೋಳ 2ನೇ ಹಂತ, ಜಡ್ಜ್ ಕಾಲೋನಿ ಹತ್ತಿರ, ಕೊನೆ ಬಸ್ ನಿಲ್ದಾಣ, ನವನಗರ, ಹುಬ್ಬಳ್ಳಿ-580025. ದೂರವಾಣಿ ಸಂಖ್ಯೆ:0836-2441199, 7019314679 ಗೆ ಸಂಪರ್ಕಿಸಬಹುದೆಂದು ಪ್ರಾದೇಶಿಕ ನಿರ್ದೇಶಕರಾದ ಡಾ.ಲೋಕೇಶ.ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular