HomeLatest Newsನಿವೃತ್ತ ನೌಕರರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆಗೆ 'ಸಂಧ್ಯಾ ಕಿರಣ' ಯೋಜನೆ ಜಾರಿ

ನಿವೃತ್ತ ನೌಕರರಿಗೆ ಗುಡ್ ನ್ಯೂಸ್: ನಗದು ರಹಿತ ಚಿಕಿತ್ಸೆಗೆ ‘ಸಂಧ್ಯಾ ಕಿರಣ’ ಯೋಜನೆ ಜಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗಾಗಿ ಸಂಧ್ಯಾ ಕಿರಣ ಯೋಜನೆ ಜಾರಿಗೊಳಿಸಲಾಗಿದೆ. ನಗದು ರಹಿತ ಚಿಕಿತ್ಸೆ ನೀಡುವ ಉದ್ದೇಶದಿಂದ ಪ್ರಾಯೋಗಿಕವಾಗಿ ನಡೆಸುತ್ತಿದ್ದು, ಇದು ಯಶಸ್ವಿಯದಲ್ಲಿ ಎಲ್ಲಾ ಕಡೆಗೆ ವಿಸ್ತರಿಸುವುದಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ತಿಳಿಸಿದ್ದಾರೆ

ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ರಾಜ್ಯ ಪರಿಷತ್ ಮಹಾಸಭೆಯಲ್ಲಿ ಅವರು ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ನಿವೃತ್ತ ನೌಕರರ ಆರೋಗ್ಯ ಸುರಕ್ಷತೆಗಾಗಿ ಸಂಧ್ಯಾ ಕಿರಣ ಯೋಜನೆ ಜಾರಿಗೊಳಿಸಲಾಗಿದೆ. ಚಿಕಿತ್ಸೆ ಪಡೆದು ಬಿಲ್ ಗಳನ್ನು ಸಲ್ಲಿಸಿದ ನಂತರ ಮರುಪಾವತಿ ವ್ಯವಸ್ಥೆ ಇದೆ. ಇದನ್ನು ನಗದು ರಹಿತವಾಗಿ ಮಾಡುವ ಉದ್ದೇಶದಿಂದ ಪ್ರಾಯೋಗಿಕವಾಗಿ ಮೂರು ತಿಂಗಳು ಮಾಡಿ ಎಂದು ಸೂಚನೆ ನೀಡಲಾಗಿದೆ. ಮರು ಪಾವತಿಗೂ ಮತ್ತು ನಗದು ರಹಿತ ಸೇವೆ ನೀಡಿದ ಆಸ್ಪತ್ರೆಗಳ ಪಾವತಿಗೆ ಆರ್ಥಿಕ ಹೊರೆ ಯಾವ ರೀತಿ ಎನ್ನುವುದನ್ನು ಪರಿಶೀಲಿಸಿ ನಂತರ ತೀರ್ಮಾನ ಕೈಗೊಳ್ಳಲಾಗುವುದು. ನಿವೃತ್ತ ನೌಕರರ ನಗದು ರಹಿತ ಚಿಕಿತ್ಸೆಗಾಗಿ ಸಂಧ್ಯಾ ಕಿರಣ ಯೋಜನೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular