HomeKarnatakaನಿವೃತ್ತ ನೌಕರರಿಗೆ ಗುಡ್ ನ್ಯೂಸ್: 'ಸಂಧ್ಯಾಕಿರಣ' ಯೋಜನೆ ಜಾರಿ

ನಿವೃತ್ತ ನೌಕರರಿಗೆ ಗುಡ್ ನ್ಯೂಸ್: ‘ಸಂಧ್ಯಾಕಿರಣ’ ಯೋಜನೆ ಜಾರಿ

ಮಂಗಳೂರು: ರಾಜ್ಯ ಸರ್ಕಾರಿ ನಿವೃತ್ತ ನೌಕರರು ಅದರಲ್ಲೂ 60 ರಿಂದ 70 ವರ್ಷದೊಳಗಿನವರಿಗೆ ಸಂಧ್ಯಾಕಿರಣ ಯೋಜನೆ ಜಾರಿಗೆ ಈಗಾಗಲೇ ಸಚಿವ ಸಂಪುಟ ಮುಂದೆ ತರಲಾಗಿದ್ದು, ಶೀಘ್ರದಲ್ಲಿ ಯೋಜನೆ ಕಾರ್ಯರೂಪಕ್ಕೆ ಬರಲಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಈಗಾಗಲೇ ಇದೆ. ಅವರು ನಿವೃತ್ತರಾದ ನಂತರ ಅವರಿಗೆ ಸಂಧ್ಯಾಕಿರಣ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಇದರಲ್ಲಿ ನೌಕರರ ಪಿಂಚಣಿಯಲ್ಲಿ ಶೇಕಡ 1.25 ರಷ್ಟು ನೀಡಬೇಕು. ನೌಕರನ ಕುಟುಂಬದ ಎಲ್ಲರಿಗೂ ಆರೋಗ್ಯ ಸೇವೆ ನೀಡಲಾಗುವುದು. ಒಂದು ವೇಳೆ ಆತ ಮೃತಪಟ್ಟಲ್ಲಿ ಅವರ ಕುಟುಂಬದವರಿಗೆ ಬರುವ ಪಿಂಚಣಿಯಲ್ಲಿ ಶೇಕಡ 1.75ರಷ್ಟು ನೀಡಿದರೆ ಅವರಿಗೂ ಈ ಸೇವೆ ವಿಸ್ತರಣೆಯಾಗಲಿದೆ. ಇದಕ್ಕಾಗಿ ವಾರ್ಷಿಕ 40 ಕೋಟಿ ರೂ. ಮೀಸಲಿಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಆರೋಗ್ಯ ಇಲಾಖೆಯಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಒಂದು ಸಾವಿರ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುವುದು. ದಾದಿಯರು, ಲ್ಯಾಬ್ ಟೆಕ್ನಿಷಿಯನ್, ಫಾರ್ಮಾಸಿಸ್ಟ್ ಸೇರಿ ಹಲವು ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಶೀಘ್ರದಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. 3500 ಹುದ್ದೆಗಳ ನೇಮಕಾತಿಗೂ ಅನುಮೋದನೆ ದೊರಕಿದೆ. ಇದರ ನೇಮಕಾತಿಯನ್ನು ವಿಶೇಷ ರೀತಿಯಲ್ಲಿ ನಡೆಸಲು ನಿಯಮಾವಳಿ ರೂಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular