HomeKarnatakaಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ಷರತ್ತು ಸರಳೀಕರಣ: ಸರ್ಕಾರ ಆದೇಶ

ಗ್ರಾಮೀಣ ಪತ್ರಕರ್ತರಿಗೆ ಗುಡ್ ನ್ಯೂಸ್: ಉಚಿತ ಬಸ್ ಪಾಸ್ ಷರತ್ತು ಸರಳೀಕರಣ: ಸರ್ಕಾರ ಆದೇಶ

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಅಡ್ಡಿಯಾಗಿದ್ದ ಕಠಿಣ ಷರತ್ತುಗಳನ್ನು ತೆಗೆದು, ನಿಯಮಾವಳಿ ಸರಳೀಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಕೆಯುಡಬ್ಲ್ಯೂಜೆ ಸ್ವಾಗತಿಸಿದೆ.

ಬೀದರ್ ನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೆಯುಡಬ್ಲ್ಯೂಜೆ) ಒತ್ತಾಯಕ್ಕೆ ಸ್ಪಂಧಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅದೇ ವೇದಿಕೆಯಲ್ಲಿ ಕಠಿಣ ಷರತ್ತುಗಳನ್ನು ಕೈಬಿಡುವುದಾಗಿ ಭರವಸೆ ನೀಡಿದ್ದರು.

ಸರ್ಕಾರಕ್ಕೆ ಮೂರು ವರ್ಷ ತುಂಬಿದಾಗ ಕೆಯುಡಬ್ಲ್ಯೂಜೆ ಏರ್ಪಡಿಸಿದ್ದ ಸಂವಾದದಲ್ಲಿ ಭಾಗವಹಿಸಿದ್ದ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಈ ಬಗ್ಗೆ ವಾರದೊಳಗೆ ಕ್ರಮ ವಹಿಸುವುದಾಗಿ ತಿಳಿಸಿದ್ದರು. ಸಿಎಂ ಸೂಚನೆ ಮೇರೆಗೆ ಹೊಸ ಆದೇಶ ಹೊರಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೂರ್ಣಾವಧಿಗೆ ಸೀಮಿತವಾಗಿದ್ದನ್ನು ಬದಲಿಸಿ, ಅರೆಕಾಲಿಕ ವರದಿಗಾರರಿಗೂ ಯೋಜನೆ ವಿಸ್ತರಿಸಲಾಗಿದೆ.

ಸೌಲಭ್ಯ ಪಡೆಯಲು 11 ತಿಂಗಳ ಲೈನೇಜ್ ಪಡೆದಿರುವ ಬ್ಯಾಂಕ್ ಸ್ಟೇಟ್ ಮೆಂಟ್ ಕಡ್ಡಾಯವಾಗಿದ್ದನ್ನು ಷರತ್ತಿನಲ್ಲಿ ಕೈಬಿಡಲಾಗಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸತತ ಹೋರಾಟಕ್ಕೆ ಸ್ಪಂಧಿಸಿ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ (ಭಾವಿ ಸಿಎಂ) ಡಿ.ಕೆ.ಶಿವಕುಮಾರ್ ಅವರು ಈ ನಿಟ್ಟಿನಲ್ಲಿ ಸತತವಾಗಿ ಸ್ಪಂಧಿಸಿದ ಸಿಎಂ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರಿಗೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಅಭಿನಂದನೆ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular