HomeKarnatakaಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ `ಬಾಪೂಜಿ ಸೇವಾ ಕೇಂದ್ರ’ದಲ್ಲಿ ಸಿಗಲಿವೆ ಈ ಎಲ್ಲಾ...

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ `ಬಾಪೂಜಿ ಸೇವಾ ಕೇಂದ್ರ’ದಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು

ಬೆಂಗಳೂರು : ಸರ್ಕಾರಿ ದಾಖಲೆಗಳು, ಸವಲತ್ತುಗಳಿಗಾಗಿ ಗ್ರಾಮೀಣ ಜನತೆ ವಿವಿದೆಡೆ ಅಲೆಯುವುದನ್ನು ತಪ್ಪಿಸಲು ಗ್ರಾಮೀಣಭಿವೃದ್ಧಿ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.

ವಿವಿಧ ಇಲಾಖೆಗಳ ಅಗತ್ಯ ದಾಖಲೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದೊಂದಿಗೆ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಕೇಂದ್ರಗಳ ಮೂಲಕ ಗ್ರಾಮೀಣ ಜನರಿಗೆ ಅವಶ್ಯಕವಿರುವ 22 ಸೇವೆಗಳನ್ನು ನೀಡಲಾಗುತ್ತಿದ್ದು, ಇವುಗಳೊಂದಿಗೆ ಹೊಸದಾಗಿ 44 ಅಗತ್ಯ ಸೇವೆಗಳನ್ನು ನೀಡಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯಿತಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ನು 66 ಸರ್ಕಾರಿ ಸೇವೆಗಳು ಸಿಗಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ರಾಮೀಣಾಭಿವೃದ್ಧಿ ಇಲಾಖೆ ಸೇವೆಗಳ ಜೊತೆಗೆ ಇನ್ನು ಮುಂದೆ ಗ್ರಾಮೀಣ ಜನರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕಂದಾಯ, ಕಾರ್ಮಿಕ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸೇವೆಯನ್ನು ಕೂಡ ಪಡೆದಬಹುದು.

ರಾಜ್ಯದ ಗ್ರಾಮೀಣ ಭಾಗಗಳ ಜನತೆಗೆ ಹೆಚ್ಚಿನ ಅನುಕೂಲ ಒದಗಿಸುವ ನಿಟ್ಟಿನಲ್ಲಿ ನಾಡಕಚೇರಿಗಳಲ್ಲಿ, ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸರ್ಕಾರಿ ಸೇವೆಗಳು ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಲಭ್ಯವಾಗಲಿದೆ.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ,  ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳ ಜೊತೆಗೆ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹಾಗೂ ಆಧಾರ್ ಸೇವೆಗಳ ಸೌಲಭ್ಯವನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲಿ ರಾಜ್ಯದ ಜನ ಪಡೆಯಬಹುದಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular