HomeLatest Newsಗ್ರಾಮೀಣ ಜನತೆಗೆ ಸಿಹಿ ಸುದ್ದಿ: ಆಸ್ತಿಗಳಿಗೆ ಇ-ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟ ಶೀಘ್ರ

ಗ್ರಾಮೀಣ ಜನತೆಗೆ ಸಿಹಿ ಸುದ್ದಿ: ಆಸ್ತಿಗಳಿಗೆ ಇ-ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟ ಶೀಘ್ರ

ಬೆಂಗಳೂರು: ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಬಗ್ಗೆ ರೂಪಿಸುತ್ತಿರುವ ಕರಡು ನಿಯಮಾವಳಿ ಜೂನ್ ಅಂತ್ಯಕ್ಕೆ ಸಿದ್ಧವಾಗಲಿವೆ. ಜುಲೈ 2ನೇ ವಾರದಲ್ಲಿ ಅಂತಿಮ ನಿಯಮಾವಳಿ ಪೂರ್ಣಗೊಳಿಸಿ ನಂತರ ಇ-ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟಿಸಲಾಗುವುದು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಕಾಸಸೌಧದ ಕೊಠಡಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ವಿತರಣೆ ಪ್ರಕ್ರಿಯೆ ನಿರೀಕ್ಷೆಯಲ್ಲಿದ್ದು, ಸರಳ ಹಾಗೂ ಸುಗಮ ರೀತಿಯಲ್ಲಿ ಇ-ಸ್ವತ್ತು ವಿತರಣೆ ವ್ಯವಸ್ಥೆ ಜಾರಿಗೆ ತರುವಂತೆ ಸೂಚನೆ ನೀಡಿದ್ದಾರೆ.

ವಿಧಾನಮಂಡಲ ಅಧಿವೇಶನದಲ್ಲಿ ಇ-ಸ್ವತ್ತು ವಿತರಣೆಗೆ ಅನುವಾಗುವಂತೆ 199- ಬಿ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಇದಕ್ಕೆ ಅನುಗುಣವಾಗಿ ಇ-ಸ್ವತ್ತು ವಿತರಣೆ ಸುಗಮಗೊಳಿಸಲು ನಿಯಮಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇ-ಸ್ವತ್ತು ಆಸ್ತಿ ನಮೂನೆ ವಿತರಿಸುವುದರಿಂದ ರಾಜ್ಯದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 1.45 ಕೋಟಿ ಆಸ್ತಿಗಳು ಇ-ಸ್ವತ್ತು ವ್ಯಾಪ್ತಿಗೆ ಬರಲಿವೆ. ಇದರಿಂದ ಸಾರ್ವಜನಿಕರ ಆಸ್ತಿಗಳು ಅಧಿಕೃತ ಆಗುವುದಲ್ಲದೆ ಗ್ರಾಮ ಪಂಚಾಯಿತಿಗಳ ಆದಾಯ ಹೆಚ್ಚಲ್ಲಿದ್ದು, ಗ್ರಾಮಗಳ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular