HomeKarnatakaಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ: ಬೇಸಿಗೆ ಎದುರಿಸಲು ವಿಶೇಷ ಅನುದಾನ

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಕುಡಿಯುವ ನೀರಿನ ಕೊರತೆಯಾಗದಂತೆ ಕ್ರಮ: ಬೇಸಿಗೆ ಎದುರಿಸಲು ವಿಶೇಷ ಅನುದಾನ

 ಬೆಂಗಳೂರು: ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ.

ರಾಜ್ಯದಲ್ಲಿ ದುರಸ್ತಿಯಾಗಬೇಕಾಗಿರುವ ಶುದ್ಧ ನೀರಿನ ಘಟಕಗಳನ್ನು (ಆರ್.ಒ ಪ್ಲಾಂಟ್) ಈ ವರ್ಷ ಆದ್ಯತೆಯ ಮೇಲೆ ಸರಿಪಡಿಸಲು ಉದ್ದೇಶಿಸಿದ್ದು, ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಮಾಡಿ ವರದಿಯನ್ನು ಸಿದ್ಧಪಡಿಸಿ ಕಳುಹಿಸುವಂತೆ ಎಲ್ಲ ಸಿಇಒಗಳಿಗೆ ಸೂಚಿಸಿದ್ದಾರೆ.

ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಈಗಾಗಲೇ ನೀಡಿರುವ ಸೂಚನೆಗಳಂತೆ ಕ್ರಮಕೈಗೊಳ್ಳಲು ನಿರ್ದೇಶಿಸಲಾಗಿದೆ. ಬೇಸಿಗೆ ಎದುರಿಸಲು ಜಿಲ್ಲೆಗಳಿಗೆ ವಿಶೇಷ ಅನುದಾನ ನೀಡಲಾಗಿದ್ದು, ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಬಹುತೇಕ ಕಡೆ ಸ್ಥಾಪಿಸಲಾಗಿರುವ ಶುದ್ಧ ನೀರಿನ ಘಟಕಗಳು ನೀರಿನ ಮೂಲಗಳಿಲ್ಲದ ಕಾರಣ ಸ್ಥಗಿತಗೊಂಡಿವೆ. ಘಟಕಗಳನ್ನು ನಿರ್ವಹಣೆ ಮಾಡುವ ಹೊಣೆಗಾರಿಕೆಯನ್ನು ನಿಗದಿ ಪಡಿಸದಿರುವುದು ಸೇರಿದಂತೆ, ಹಲವು ಕಾರಣಗಳಿಂದ ಕಾರ್ಯನಿರ್ವಹಿಸದಿರುವ ಘಟಕಗಳನ್ನು ದುರಸ್ತಿಗೊಳಿಸುವ ಮುನ್ನ ಸಾಧಕ-ಬಾಧಕಗಳನ್ನು ಪರಿಶೀಲಿಸಬೇಕು. ಈ ಸಂಬಂಧ ವಿವರವಾದ ನೀಲನಕ್ಷೆಯನ್ನು ಸಿದ್ಧಪಡಿಸಿ, ವಾಸ್ತವಿಕ ವರದಿಯನ್ನು ಕಳುಹಿಸುವಂತೆ ತಿಳಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ಸಲ್ಲಿಸುವ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಉತ್ತರ ನೀಡುವ ಮೂಲಕ ಅಧಿಕಾರಿಗಳು ಉತ್ತರದಾಯಿಗಳಾಗಬೇಕು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕಳೆದ ವರ್ಷದಂತೆ ಈ ವರ್ಷವೂ ತಾಲ್ಲೂಕು ಮಟ್ಟದಲ್ಲಿ ನೀರಿನ ಸಮಸ್ಯೆಗಳನ್ನು ಆಲಿಸುವ ಸಹಾಯವಾಣಿಗಳನ್ನು ತೆರೆಯಬೇಕೆಂದು ನಿರ್ದೇಶಿಸಿದ್ದಾರೆ.

ಬೇಸಿಗೆ ಅವಧಿಯಲ್ಲಿ ಬಾಡಿಗೆಗೆ ಪಡೆಯುವ ಟ್ಯಾಂಕರ್‌ಗಳಿಗೆ ಹಾಗೂ ಖಾಸಗಿ ಕೊಳವೆಬಾವಿಗಳಿಗೆ ಹಣ ಪಾವತಿ ಮಾಡುವಲ್ಲಿ ವಿಳಂಬವಾಗದಂತೆ ನೋಡಿಕೊಳ್ಳಬೇಕು. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿನ ಗ್ರಾಮೀಣ ನೀರು ಸರಬರಾಜು ಇಲಾಖೆಯ ಎಂಜಿನಿಯರ್‌ಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular