ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಮುಂದಿನ ತಿಂಗಳು `ಆಶಾಕಿರಣ ಯೋಜನೆ’ ಜಾರಿ

ಹುಬ್ಬಳ್ಳಿ : ರಾಜ್ಯದ ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ, ಮುಂದಿನ ತಿಂಗಳು ಗ್ರಾಮೀಣ ಜನರಿಗೆ ಕಣ್ಣಿನ ತಪಾಸಣೆ, ಪೊರೆಗೆ ಚಿಕಿತ್ಸೆ ಸೇರಿದಂತೆ ವಿವಿಧ ಚಿಕಿತ್ಸೆ ನೀಡುವ ಆಶಾಕಿರಣ ಯೋಜನೆಯನ್ನು ಮುಂದಿನ ತಿಂಗಳು ಜಾರಿಗೆ ತರಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಗ್ರಾಮೀಣ ಪ್ರದೇಶಗಳಿಗೆ ಮೊಬೈಲ್ ಚಿಕಿತ್ಸಾ ವಾಹನದ ಮೂಲಕ ತೆರಳಿ  ಸಕಲ ಚಿಕಿತ್ಸಾ ಸೌಲಭ್ಯ ಹೊಂದಿರುವ ಮೊಬೈಲ್ ಯುನಿಟ್ ತಲುಪಿಸಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಾಯೋಗಿಕವಾಗಿ ಎಂಟು ಜಿಲ್ಲೆಗಳಲ್ಲಿ ಜಾರಿಗೊಳಿಸಲಾಗುವುದು. ಇದಕ್ಕೆ ಬೇಕಾದ ವಾಹನಗಳ ಖರೀದಿಗೆ ಟೆಂಡರ್ ಪ್ರಕ್ರಿಯೆ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಗ್ರಾಮೀಣ ಜನರಲ್ಲಿ ಹೃದಯಾಘಾತ, ಕ್ಯಾನ್ಸರ್ ನಂತ ಅಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿವೆ. ಇದನ್ನು ನಿಯಂತ್ರಿಸಲು ಇಲಾಖೆಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read