ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ʼಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕʼ ವಾಹನಗಳಿಗೆ ಚಾಲನೆ

 

ಬೆಂಗಳೂರು :  ರಾಜ್ಯದ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಇಂದು ಆರೋಗ್ಯಸೌಧದಲ್ಲಿ ಹೊಸದಾಗಿ 8 ʼಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕʼ ವಾಹನಗಳಿಗೆ ಸಚಿಚ ದಿನೇಶ್‌ ಗುಂಡೂರಾವ್ ಚಾಲನೆ ನೀಡಿದ್ದಾರೆ. ‌

ಜಿಲ್ಲಾ ಸಂಚಾರಿ ನೇತ್ರ ಚಿಕಿತ್ಸಾ ಘಟಕ ವಾಹನಗಳು ಆರೋಗ್ಯ ಸೇವೆಗಳು ಲಭ್ಯವಿಲ್ಲದ ಗ್ರಾಮೀಣ, ಗುಡ್ಡಗಾಡು ಪ್ರದೇಶಗಳಲ್ಲಿರುವ ಜನರಿಗೆ ಕಣ್ಣಿನ ಆರೈಕೆ, ಚಿಕಿತ್ಸೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಜಿಲ್ಲಾ ನೇತ್ರ ಸಂಚಾರಿ ಘಟಕಗಳು ಕೆಲಸ ಮಾಡಲಿವೆ ಎಂದು ತಿಳಿಸಿದರು.

ಸಾರ್ವಜನಿಕರ ಕಣ್ಣಿನ ಪ್ರಾಥಮಿಕ ತಪಾಸಣೆ ನಡೆಸಲು ಅಗತ್ಯವಾದ ಉಪಕರಣಗಳನ್ನು ಒಳಗೊಂಡಿರುವ ಈ ವಾಹನದಲ್ಲಿ ಓರ್ವ ನೇತ್ರ ತಜ್ಞರು, ಪ್ಯಾರಾ ಮೆಡಿಕಲ್ ನೇತ್ರ ಸಹಾಯಕ (PMOA), ಬ್ಲಾಕ್ ಹೆಲ್ತ್ ಎಜುಕೇಶನ್ ಆಫೀಸರ್ (BHEO), ಸ್ಟಾಫ್ ನರ್ಸ್ ಇರಲಿದ್ದಾರೆ. ಪ್ರತಿ ವಾಹನವು 15 ರೋಗಿಗಳನ್ನು ಸಮೀಪದ ಆರೋಗ್ಯ ಕೇಂದ್ರಗಳಿಗೆ ಕರೆದೊಯ್ಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ.

ಮೈಸೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ, ಗದಗ, ಯಾದಗಿರಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಈ ಹೊಸ ಸಂಚಾರಿ ನೇತ್ರ ಚಿಕಿತ್ಸಾ ಘಟಕ ವಾಹನಗಳು ಸಂಚರಿಸಲಿವೆ. ಈಗಾಗಲೇ ರಾಜ್ಯದ 17 ಜಿಲ್ಲೆಗಳಲ್ಲಿ ಸಂಚಾರಿ ನೇತ್ರ ಚಿಕಿತ್ಸಾ ಘಟಕಗಳು ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿವೆ. ಜನರ ಆರೋಗ್ಯ ರಕ್ಷಣೆಗೆ ನಮ್ಮ ಆರೋಗ್ಯ ಇಲಾಖೆ ಸದಾ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read