HomeLatest Newsಗ್ರಾಮೀಣ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: 15 ದಿನದಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಬಿ ಖಾತಾ ವಿತರಣೆ

ಗ್ರಾಮೀಣ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: 15 ದಿನದಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿ ಬಿ ಖಾತಾ ವಿತರಣೆ

ಬೆಂಗಳೂರು: ಮುಂದಿನ 15 ದಿನಗಳಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿ ಖಾತಾ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಪಂಚಾಯತ್ ರಾಜ್ ಕಾಯ್ದೆಗೆ ಕಳೆದ ಅಧಿವೇಶನದಲ್ಲಿ ತಿದ್ದುಪಡಿ ತರಲಾಗಿದೆ. ರಾಜ್ಯಪಾಲರ ಅನುಮೋದನೆಗೆ ಬಾಕಿ ಇದ್ದ ಕಾರಣ ಇ ಸ್ವತ್ತು ತಂತ್ರಾಂಶದಡಿ ಗ್ರಾಮೀಣ ಭಾಗದಲ್ಲಿ ಬಿ ಖಾತಾ ನೀಡುತ್ತಿಲ್ಲ. ಈ ಬಗ್ಗೆ ಸಾರ್ವಜನಿಕರ ಆಕ್ಷೇಪಣೆ ಕರೆಯಲಾಗಿದೆ. 28 ಆಕ್ಷೇಪಣೆ ಸಲ್ಲಿಕೆಯಾಗಿದ್ದು, ಅವುಗಳನ್ನು ಪರಿಶೀಲಿಸಿ 15 ದಿನದಲ್ಲಿ ಬಿ ಖಾತಾ ವಿತರಿಸಲು ಸಮಗ್ರ ನಿಯಮ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಮುಂದಿನ ಒಂದೂವರೆ ತಿಂಗಳಲ್ಲಿ 11 ಬಿ ಖಾತಾದ ಸಾಫ್ಟ್ವೇರ್ ಸರಿಪಡಿಸಲಾಗುವುದು. ಇಡೀ ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ 2237 ಕೋಟಿ ರೂ. ತೆರಿಗೆ ಸಂಗ್ರಹಿಸಿದ್ದು, ಕೆಲವು ನಿಯಮ ಮತ್ತು ತಿದ್ದುಪಡಿ ತಂದಲ್ಲಿ ಇನ್ನೂ ಸಾವಿರಾರು ಕೋಟಿ ರೂ. ತೆರಿಗೆ ಸಂಗ್ರಹವಾಗುತ್ತದೆ. ಅದನ್ನು ಗ್ರಾಮ ಪಂಚಾಯಿತಿಗಳ ಮೂಲಸೌಕರ್ಯಕ್ಕೆ ಬಳಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular