HomeKarnatakaರಾಜ್ಯದ ʻಗ್ರಾಮೀಣ ವಿದ್ಯಾರ್ಥಿʼಗಳಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳು 600 ರೂ. ಸಾರಿಗೆ ಭತ್ಯೆ

ರಾಜ್ಯದ ʻಗ್ರಾಮೀಣ ವಿದ್ಯಾರ್ಥಿʼಗಳಿಗೆ ಗುಡ್ ನ್ಯೂಸ್ : ಪ್ರತಿ ತಿಂಗಳು 600 ರೂ. ಸಾರಿಗೆ ಭತ್ಯೆ

ಬೆಳಗಾವಿ : ರಾಜ್ಯದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ, ದೂರದ ಊರುಗಳ ಶಾಲೆಗಳ ತೆರಳುವ ಮಕ್ಕಳಿಗೆ ಕೇಂದ್ರ ಸರ್ಕಾರದ ಪ್ರಾಯೋಜಿತ ಸಮಗ್ರ ಶಿಕ್ಷಣ ಯೋಜನೆಯಡಿ  ರೂ.600 ಸಾರಿಗೆ ಭತ್ಯೆ ನೀಡಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವರು,  ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳ ಮೂಲಕ ಶಾಲೆಗಳಿಗೆ ಹೋಗಲು ಉಚಿತ ಬಸ್‌ ಪಾಸ್‌ ವಿತರಿಸಲಾಗುತ್ತಿದೆ. ದೂರದ ಊರುಗಳ ಶಾಲೆಗಳಿಗೆ ತೆರಳುವ ಮಕ್ಕಳಿಗೆ ಕೇಂದ್ರ ಸರ್ಕಾರದ ಪ್ರಾಯೋಜಿತ ʻಸಮಗ್ರ ಶಿಕ್ಷಣ ಕರ್ನಾಟಕʼ ಯೋಜನೆಯಡಿ ಆರು ತಿಂಗಳ ಅವಧಿಗೆ ಪ್ರತಿ ತಿಂಗಳಿಗೆ ರೂ.600 ಸಾರಿಗೆ ಭತ್ಯೆ ನೀಡಲಾಗುತ್ತಿದೆ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯಾದ್ಯಂತ ಶಾಲೆಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಕೊಠಡಿಗಳ ನಿರ್ಮಾಣ ಕಾರ್ಯ ಚುರುಕುಗೊಳಿಸಲಾಗಿದ್ದು. ಈ ಸಾಲಿನಲ್ಲಿ 9,604 ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular