ರಾಜ್ಯದ ಗ್ರಾಮೀಣ ಯುವಕರಿಗೆ ಗುಡ್‌ ನ್ಯೂಸ್‌ : 20 ಲಕ್ಷ‌ ರೂ. ವರೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಯುವಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನವೋದ್ಯಮ ಯೋಜನೆಯಡಿ 20 ಲಕ್ಷ‌ ರೂ. ವರೆಗೆ ಸಹಾಯಧನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ಕೃಷಿ ಕ್ಷೇತ್ರದಲ್ಲಿ ನೂತನ ಪರಿಕಲ್ಪನೆಯೊಂದಿಗೆ ಆರಂಭಿಸುವ ಹೊಸ ಕೃಷಿ ನವೋದ್ಯಮಿಗಳಿಗೆ ಅನುಮೋದಿತ ಯೋಜನಾ ವರದಿಯ ಶೇ.50ರ ಷ್ಟು ಸಹಾಯಧನ ಕನಿಷ್ಠ ರೂ.5ಲಕ್ಷದಿಂದ ಗರಿಷ್ಠ ರೂ.20 ಲಕ್ಷಗಳವರೆಗೆ ಬ್ಯಾಂಕ್ ಸಾಲದ ಮುಖಾಂತರ ನೀಡಲಾಗುತ್ತದೆ. ಆಸಕ್ತರು ಅರ್ಜಿಯನ್ನು 2024 ಜ.15ರೊಳಗಾಗಿ ಜಂಟಿ ಕೃಷಿ ನಿರ್ದೇಶಕರು, ಕೃಷಿ ಇಲಾಖೆಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

ಈಗಾಗಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆಗಾಗಿ ಹಾಗೂ ಉನ್ನತೀಕರಣಕ್ಕಾಗಿ ಯೋಜನಾ ವರದಿಯ ಶೇ.50 ರಷ್ಟು ಸಹಾಯಧನವನ್ನು (ಕನಿಷ್ಠ-ರೂ.20 ಲಕ್ಷದಿಂದ ಗರಿಷ್ಠ ರೂ.50 ಲಕ್ಷಗಳವರೆಗೆ) ಕೃಷಿ ವಲಯದ ನವೋದ್ಯಮಿಗಳಿಗೆ ಬ್ಯಾಂಕ್ ಸಾಲದ ಮುಖಾಂತರ  ನೀಡಲಾಗುವುದು.

ಪ್ರಸಕ್ತ 2023-24ರ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು ನವೋದ್ಯಮ ಎಂಬ ಹೊಸ ಯೋಜನೆ ಘೋಷಿಸಿರುತ್ತಾರೆ. ರೈತರ ನೂತನ ಪರಿಕಲ್ಪನೆಗಳಿಗೆ ಉತ್ತೇಜನ ನೀಡಿ ಕೃಷಿಯೊಂದಿಗೆ ಉದ್ಯಮಿಗಳಾಗಿ ಪರಿವರ್ತನೆ ಹೊಂದುವಂತೆ ಹಾಗೂ ರೈತರ ಆದಾಯ ವೃದ್ಧಿಸುವಲ್ಲಿ ಸಹಕಾರಿಯಾಗುವಂತೆ ರಾಜ್ಯಾದ್ಯಂತ ಕೃಷಿ ವಲಯದಲ್ಲಿ ನೂತನ ಆವಿಷ್ಕಾರಗಳು, ನವೀನ ಉತ್ಪನ್ನಗಳು ಹಾಗೂ ಸೇವೆಗಳನ್ನು ಒಳಗೊಂಡಿರುವ ಕೃಷಿ ನವೋದ್ಯಮಗಳಿಗೆ ಉತ್ತೇಜನ ನೀಡಲಾಗುವುದು.

ಹೆಚ್ಚಿನ ಮಾಹಿತಿ ಹಾಗೂ ನಿಗಧಿತ ಅರ್ಜಿ ನಮೂನೆಯನ್ನು ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರವರಿಂದ ಪಡೆಯಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read