HomeKarnataka'SC' ಸಮುದಾಯಕ್ಕೆ ಸರ್ಕಾರದಿಂದ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

‘SC’ ಸಮುದಾಯಕ್ಕೆ ಸರ್ಕಾರದಿಂದ ಗುಡ್ ನ್ಯೂಸ್ : ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಪ್ರಸಕ್ತ (2023-24) ಸಾಲಿನ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಹಾಗೆಯೇ 2023-24 ನೇ ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ : https://sevasindhuservices.karnataka.gov.in
ಸ್ವಯಂ ಉದ್ಯೋಗ ನೇರಸಾಲ ಯೋಜನೆ: ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಗೆ ವಿವಿಧ ಆರ್ಥಿಕ ಗಳಿಕೆಯ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು, ಸಣ್ಣ ಆದಾಯ ಗಳಿಸಲು ಆರ್ಥಿಕ ಚಟುವಟಿಕೆಗಳಿಗಾಗಿ ನಿಗಮಗಳಿಂದ ನೇರ ಸಾಲ (ಗರಿಷ್ಟ ವೆಚ್ಚ ರೂ.1 ಲಕ್ಷ, ಅದರಲ್ಲಿ ಶೇ.50 ಸಾಲ ಮತ್ತು ಶೇ.50 ಸಹಾಯಧನ (ಶೇಕಡ 4ರಷ್ಟು ಬಡ್ಡಿ ದರ).
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ: (ಬ್ಯಾಂಕುಗಳ ಸಹಯೋಗದೊಂದಿಗೆ) ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ. ಘಟಕ ವೆಚ್ಚದ ಶೇ70.ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.1 ಲಕ್ಷ, ಘಟಕ ವೆಚ್ಚದ ಶೇ.70ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.2 ಲಕ್ಷ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ವಾವಲಂಬಿ ಸಾರಥಿ: ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಘಟಕ ವೆಚ್ಚದ ಶೇ.75ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.4 ಲಕ್ಷ. ಮೈಕ್ರೋ ಕ್ರೆಡಿಟ್ ಯೋಜನೆ (ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು): ಮಹಿಳೆಯರಲ್ಲಿ ಗುಂಪು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿ ಆದಾಯ ಗಳಿಸಲು ಅನುಕೂಲವಾಗುವಂತೆ ಕನಿಷ್ಟ 10 ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ರೂ.2.50 ಲಕ್ಷಗಳನ್ನು ಮಂಜೂರು ಮಾಡಲಾಗುವುದು. ಇದರಲ್ಲಿ ರೂ.1.50 ಲಕ್ಷ ಸಹಾಯಧನ ಮತ್ತು ರೂ.1 ಲಕ್ಷ ಸಾಲ(ಶೇಕಡ 4ರಷ್ಟು ಬಡ್ಡಿ ದರ).

ಗಂಗಾ ಕಲ್ಯಾಣ ಯೋಜನೆ: 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ ವಿದ್ಯದ್ಧೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ.3.75 ಲಕ್ಷ (ಇದರಲ್ಲಿ ರೂ.50 ಸಾವಿರ ಸಾಲವೂ ಸೇರಿರುತ್ತದೆ.)

ಭೂ ಒಡೆತನ ಯೋಜನೆ: ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಟ ಒಂದು ಎಕರೆ ಭಾಗಾಯ್ತು ಅಥವಾ ಎರಡು ಏಕರೆ ಖುಷ್ಕಿ ಜಮೀನನ್ನು ಖರೀದಿಸಿ ಕೊಡಲಾಗುವುದು. ಘಟಕ ವೆಚ್ಚ ರೂ.25 ಲಕ್ಷ/ 20 ಲಕ್ಷ ಸಹಾಯಧನ ಶೇ.50. ಸಾಲ ಶೇ.50 (ಶೇಕಡ 6 ರಷ್ಟು ಬಡ್ಡಿದರ).

ಯೋಜನೆಗಳ ಹೆಚ್ಚಿನ ಮಾಹಿತಿಗೆ ನಿಗಮದ ವೆಬ್ಸೈಟ್ https://adcl.karnataka.gov.in ಮೂಲಕ ಪಡೆದುಕೊಳ್ಳುವುದು. ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾಂಶದ ವೆಬ್ಸೈಟ್ ವಿಳಾಸ: https://sevasindhuservices.karnataka.gov.in ಮೂಲಕ ಅರ್ಜಿಗಳನ್ನು ಅಪ್ಲೋಡ್ ಮಾಡಲು ಡಿಸೆಂಬರ್, 15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹಾಗೆಯೇ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಯೋಜನೆಗೆ https://kmvstdcl.karnataka.gov.in ಮೂಲಕ ಪಡೆದುಕೊಳ್ಳುವುದು. ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾಂಶದ ವೆಬ್ಸೈಟ್ ವಿಳಾಸhttps://sevasindhuservices.karnataka.gov.in ಮೂಲಕ ಅರ್ಜಿಗಳನ್ನು ಅಪ್ಲೋಡ್ ಮಾಡಲು ಡಿಸೆಂಬರ್, 15 ರವರೆಗೆ ವಿಸ್ತರಿಸಲಾಗಿದೆ. ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಕರ್ನಾಟ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ದೂ.ಸಂ.08272-228857 ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular