HomeLatest NewsSC/ST, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕ ಮುಕ್ತ ವಿವಿಯಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ...

SC/ST, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕ ಮುಕ್ತ ವಿವಿಯಲ್ಲಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ !

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ಮಡಿಕೇರಿಯಲ್ಲಿ 2026-27 ನೇ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್‍ಗಳಿಗೆ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕ.ರಾ.ಮು.ವಿ ಮಡಿಕೇರಿಯಲ್ಲಿ 2026-27 ಸಾಲಿನ ಉಚಿತ ಪ್ರವೇಶಾತಿಗೆ ಜುಲೈ, 31 ಕೊನೆಯ ದಿನವಾಗಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ತನ್ನ 2026-27ನೇ ಜುಲೈ ಆವೃತ್ತಿಗೆ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿಗೆ ಈಗಾಗಲೇ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಮುಕ್ತ ವಿಶ್ವವಿದ್ಯಾಲಯವು “ನಿಮ್ಮ ಮನೆಯೇ ನಿರಂತರ ಪಾಠಶಾಲೆ” ಎಂಬ ಧ್ಯೆಯ ವಾಕ್ಯದೊಂದಿಗೆ ಯು.ಜಿ.ಸಿ ಅನುಮೋದಿತ ಶಿಕ್ಷಣ ಕ್ರಮಗಳ ಅಧ್ಯಯನದ ಅವಕಾಶವನ್ನು ವಿದ್ಯಾರ್ಥಿಗಳಿಗೆ ಈಗಾಗಲೇ ಹಲವು ವರ್ಷಗಳಿಂದ ನೀಡುತ್ತಾ ಬಂದಿದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ರಾಜ್ಯದಲ್ಲಿ ಮುಕ್ತ ಶಿಕ್ಷಣ ನೀಡುವ ಏಕೈಕ ವಿದ್ಯಾಲಯವಾಗಿದೆ.

ಸ್ನಾತಕ ಶಿಕ್ಷಣ ಕಾರ್ಯಕ್ರಮಗಳ ಅಡಿಯಲ್ಲಿ ಬರುವ ಬಿ.ಎ, ಬಿ.ಕಾಂ, ಬಿ.ಲಿಬ್ ಐಎಸ್ಸಿ, ಬಿ.ಬಿ.ಎ, ಬಿಸಿಎ, ಬಿಎಸ್ಸಿ, ಬಿಎಸ್‍ಡಬ್ಲ್ಯೂ ಹಾಗು ಸ್ನಾತಕೋತ್ತರ ಪಿಜಿ. ಕೋಸ್ರ್ಗಳಾದ ಎಂಎ, ಎಂಎ-ಪತ್ರಿಕೋದ್ಯಮ, ಎಂಕಾಂ, ಎಂಬಿಎ, ಎಂಲಿಬ್‍ಐಎಸ್ಸಿ, ಎಂಎಸ್ಸಿ, ಎಂಸಿಎ, ಎಂಎಸ್‍ಡಬ್ಲೂ (ಪಿ.ಜಿ. ಡಿಪ್ಲೋಮಾ ಪ್ರೋಗ್ರಾಮ್ಸ್ ಸರ್ಟಿಫಿಕೇಟ್ ಪ್ರೋಗ್ರಾಮ್ಸ್) 2026-27 ರ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯಿಂದ ಹೊಸದಾಗಿ ಪ್ರಾರಂಭಿಸಿರುವ ಜ್ಯೋತಿರ್ ವಿಜ್ಞಾನ (ಪಲ ಜ್ಯೋತಿಷ್ಯ, ಮೇಧಿನಿ ಜ್ಯೋತಿಷ್ಯ ವಾಸ್ತು ಜ್ಯೋತಿಷ್ಯ) ಮತ್ತು ಲಿಂಗ್ವಿಸ್ಟಿಕ್ಸ್ ಕೋರ್ಸ್‍ಗಳಿಗೆ ಪ್ರವೇಶಾತಿ ಪ್ರಾರಂಭವಾಗಿರುತ್ತದೆ. ಪ್ರವೇಶಾತಿಯು ಸೆಪ್ಟೆಂಬರ್, 15 ಕೊನೆಯ ದಿನವಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಉಚಿತ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಷರತ್ತು ಬದ್ದ ಶುಲ್ಕ ವಿನಾಯಿತಿ ಇರುತ್ತದೆ. ಹಾಗೂ ಅಲ್ಪಸಂಖ್ಯಾತ ಸಮುದಾಯಗಳಾದ (ಮುಸ್ಲಿಂ, ಕ್ರೈಸ್ತ, ಜೈನ, ಭೌದ್ಧ, ಸಿಖ್ಖ್, ಪಾರ್ಸಿ) (ಆದಾಯ ಪ್ರಮಾಣ ಪತ್ರವು 8 ಲಕ್ಷಗಳಿಗೆ ಮೀರಬಾರದು ಮತ್ತು ಆದಾಯ ಮತ್ತು ಜಾತಿ ದೃಡೀಕರಣ ಪತ್ರ ಕಡ್ಡಾಯವಾಗಿರುತ್ತದೆ.) ಅರ್ಜಿ ಸಲ್ಲಿಸುವ ವಿದ್ಯಾರ್ಥಿಯು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕೋರ್ಸ್‍ಗಳಿಗೆ ಪ್ರವೇಶ ಪಡೆಯುವಾಗ ಬೇರೆ ಯಾವುದೇ ವಿಶ್ವವಿದ್ಯಾನಿಲಯ ಸಂಸ್ಥೆಯಲ್ಲಿ ಪೂರ್ಣಕಾಲಿಕ /ಅರೆಕಾಲಿಕ/ ದೂರಶಿಕ್ಷಣ ಪದವಿ.ಸ್ನಾತ್ತಕೋತ್ತರ ಪದವಿ/ ಇನ್ನಿತರ ಯಾವುದೇ ಕೋರ್ಸ್‍ಗಳಲ್ಲಿ ದಾಖಲಾತಿಯನ್ನು ಹೊಂದಿರಬಾರದು. ಈ ಸಮುದಾಯದವರಿಗೆ ಉಚಿತ ಪ್ರವೇಶಾತಿ ಇರುತ್ತದೆ. ಮತ್ತು ಉಚಿತ ಪ್ರವೇಶಾತಿಯ ಜುಲೈ, 31 ಕೊನೆಯ ದಿನವಾಗಿರುತ್ತದೆ. ಈ ವಿದ್ಯಾರ್ಥಿಗಳಿಗೆ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳು ಕಡ್ಡಾಯವಾಗಿ ಸಲ್ಲಿಸಬೇಕು, ಮತ್ತು ಆದಾಯ ರೂ. ಎಂಟು ಲಕ್ಷ ಮೀರಿರ ಬಾರದು. ಪ್ರವೇಶಾತಿಗೆ ಈ ಕೆಳಗಿನ ದಾಖಲೆಗಳು ಕಡ್ಡಾಯವಾಗಿರುತ್ತದೆ. ಎಸ್.ಎಸ್.ಲ್.ಸಿ ಅಂಕಪಟ್ಟಿ ಜೆರಾಕ್ಸ್. ಪಿಯುಸಿ ಅಥವಾ ತತ್ಸಮಾನ ಅಂಕಪಟ್ಟಿ ಜೆರಾಕ್ಸ್. ಪದವಿ ಅಂಕಪಟ್ಟಿ ಜೆರಾಕ್ಸ್ (ಎಲ್ಲಾ ವರ್ಷಗಳ ಅಥವಾ ಎಲ್ಲಾ ಸೆಮಿಸ್ಟರ್ಗಳು), ಆಧಾರ್ ಕಾರ್ಡ್ ಜೆರಾಕ್ಸ್. ಬ್ಯಾಂಕ್ ಖಾತೆ ವಿವರಗಳು, ಬ್ಯಾಂಕ್ ಖಾತೆ ಸಂಖ್ಯೆ, ಬ್ಯಾಂಕ್ ಖಾತೆ ಹೋಲ್ಡರ್ ಹೆಸರು, ಬ್ಯಾಂಕ್ನ ಹೆಸರು, ಐಎಫ್‍ಎಸ್‍ಸಿ ಕೋಡ್. ನಾಲ್ಕು ಫೆÇೀಟೋಗಳು, ದೂರವಾಣಿ ಸಂಖ್ಯೆ, ವಿದ್ಯಾರ್ಥಿ ಇ-ಮೇಲ್ ಐಡಿ, ಬಿಪಿಎಲ್ ಕಾರ್ಡ್ (ಮಹಿಳೆಯರಿಗೆ ಮಾತ್ರ). ಎಟಿಎಂ ಕಾರ್ಡ್/ ಫೆÇೀನ್ ಪೇ/ ಗೂಗಲ್ ಪೇ/ ನೆಟ್ ಬ್ಯಾಂಕಿಂಗ್ – ಶುಲ್ಕ ಪಾವತಿಗಾಗಿ ಆದಾಯ ಮತ್ತು ಜಾತಿ ಪ್ರಮಾಣ ಪತ್ರ (ಉಚಿತ ಪ್ರವೇಶಾತಿಗೆ). ಹೆಚ್ಚಿನ ಮಾಹಿತಿಗೆ ಮಡಿಕೇರಿ ಜೂನಿಯರ್ ಕಾಲೇಜು ಆವರಣದ ಭವನದಲ್ಲಿರುವ ಪ್ರಾದೇಶಿಕ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ ಮತ್ತು 8296215714, 9483570900, 9844395986 ಈ ದೂರವಾಣಿಯ ಮುಖಾಂತರ ವಿವರ ಪಡೆಯಬಹುದಾಗಿದೆ ಎಂದು ಕೇಂದ್ರದ ಪ್ರಾದೇಶಿಕ ನಿರ್ದೇಶಕಿ ಸ್ಮಿತಾಸುಬ್ಬಯ್ಯ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular