HomeKarnatakaSC ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ

SC ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪನೆಗೆ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪನೆಗೆ ಸಹಾಯಧನ ಯೋಜನೆಯಡಿ ಪರಿಶಿಷ್ಟ ಜಾತಿಯ ಯಾವುದೇ ಪದವಿ ಪಡೆದು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ 10 ವರ್ಷಗಳ ಸೇವಾನುಭವ ಹೊಂದಿರುವ ಹಾಗೂ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪ್ರಮುಖ ಮಾಧ್ಯಮ ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಹೆಸರು ನಮೂದಿಸಿರುವ ಪತ್ರಕರ್ತರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.

ಈ ಸಂಬಂಧ ಪ್ರಾಯೋಗಿಕವಾಗಿ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ರಾಜ್ಯದ ಇತರೆ ಮಹಾನಗರ ಪಾಲಿಕೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪತ್ರಕರ್ತರು ಇಲಾಖೆಯ ವೆಬ್ಸೈಟ್ www.sw.kar.nic.in ನಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಫೆಬ್ರವರಿ, 26 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ ದೂ.ಸಂ. 08272-225531 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular