ರಾಜ್ಯದ ʻSC-STʼ ವರ್ಗದವರಿಗೆ ಗುಡ್ ನ್ಯೂಸ್ : ಈ ಆರ್ಥಿಕ ಯೋಜನೆಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು :  ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ 2023-2024ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಮೈಕ್ರೋಕ್ರೆಡಿಟ್ (ಪ್ರೇರಣಾ) ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 15.12.2023ರ ವರೆಗೆ ವಿಸ್ತರಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಿವಿಧ ನಿಗಮ/ಮಂಡಳಿಗಳ ವಿವಿಧ ಯೋಜನೆಗಳಿಗೆ ಆನ್ʼಲೈನ್ ಅರ್ಜಿ ಸಲ್ಲಿಸುವ ದಿನಾಂಕವನ್ನು 15 ಡಿಸೆಂಬರ್ 2023ರ ವರೆಗೆ ವಿಸ್ತರಿಸಲಾಗಿದೆ.

ಆಸಕ್ತರು ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಹ ಫಲಾಪೇಕ್ಷಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಕೋರಲಾಗಿದೆ. ಹತ್ತಿರದ ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಫಲಾಪೇಕ್ಷಿಗಳು ಈ ಕೆಳಕಂಡ ಲಿಂಕ್‌ ನಲ್ಲಿ ಸಹ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. https://sevasindhu.karnataka.gov.in/ Sevasindhu/DepartmentServices

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read