ರಾಜ್ಯದ `SC-ST’ ವರ್ಗದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ : `ಸ್ವಾವಲಂಬಿ ಯೋಜನೆ’ಯಡಿ `ಸರಕು ವಾಹನ\ಟ್ಯಾಕ್ಸಿ ‘ಖರೀದಿಗೆ ಅರ್ಜಿ ಆಹ್ವಾನ

ಬೆಂಗಳೂರು :  ಸ್ವಾವಲಂಬಿ ಸಾರಥಿ ಯೋಜನೆಯಡಿ ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ಖರೀದಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ಪಡೆಯಲು ನವೆಂಬರ್ 29ರ ಒಳಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಡಾ.ಬಿ.ಆರ್.ಅಂಬೇಡ್ಕರ್  ಅಭಿವೃದ್ಧಿ ನಿಗಮದ ವತಿಯಿಂದ ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಾವಲಂಬಿ  ಸಾರಥಿ ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ ಯುವತಿಯರಿಗೆ ನಿಗಮದ ಸಹಾಯಧನ ಹಾಗೂ ಬ್ಯಾಂಕ್ ಸಾಲ ಸಹಯೋಗದೊಂದಿಗೆ ಉದ್ಯೋಗ ಅವಕಾಶ ಒದಗಿಸಲಾಗುತ್ತದೆ. ಯೋಜನೆಯಡಿ ಘಟಕವೆಚ್ಚ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.1  ಲಕ್ಷ, ಘಟಕವೆಚ್ಚ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.2 ಲಕ್ಷ. ಸ್ವಾವಲಂಬಿ ಸಾರಥಿ ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ ಘಟಕವೆಚ್ಚದ ಶೇ. 75 ರಷ್ಟು ಸಹಾಯಧನ ಅಥವಾ ಗರಿಷ್ಟ ರೂ.4 ಲಕ್ಷ ಒದಗಿಸಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read