HomeLatest Newsಎಸ್ಸಿ, ಎಸ್ಟಿ ಸಮುದಾಯದವರಿಗೆ ಗುಡ್ ನ್ಯೂಸ್: ವೈದ್ಯಕೀಯ ಸಹಾಯಧನಕ್ಕೆ ಅರ್ಜಿ

ಎಸ್ಸಿ, ಎಸ್ಟಿ ಸಮುದಾಯದವರಿಗೆ ಗುಡ್ ನ್ಯೂಸ್: ವೈದ್ಯಕೀಯ ಸಹಾಯಧನಕ್ಕೆ ಅರ್ಜಿ

ಕೊಪ್ಪಳ: ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯದವರಿಗೆ ಶಸ್ತ್ರ ಚಿಕಿತ್ಸೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

 2026-27ನೇ ಸಾಲಿನ ಶೇ. 24.10ರ ಯೋಜನೆಯಡಿ ಈ ಸೌಲಭ್ಯ ಕಲ್ಪಿಸಲಾಗಿದ್ದು, ಜಿಲ್ಲಾಧಿಕಾರಿಗಳ ಕಚೇರಿ ಆದೇಶದಂತೆ ನಗರಸಭೆ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಶೇ.40ರಷ್ಟು ವೈದ್ಯಕೀಯ ಸಹಾಯಧನ ಮಂಜೂರು ಮಾಡಲು ಉದ್ದೇಶಿಸಲಾಗಿದೆ. ಅರ್ಜಿ ಸಲ್ಲಿಸಲು ಆಸಕ್ತರು ಜೂನ್ 15 ರೊಳಗಾಗಿ ಕೊಪ್ಪಳ ನಗರಸಭೆ ಕಾರ್ಯಾಲಯದಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.

 ಅರ್ಜಿ ಸಲ್ಲಿಸುವವರು ಕೊಪ್ಪಳ ನಗರದ ಕಾಯಂ ನಿವಾಸಿಯಾಗಿರಬೇಕು. ಜೊತೆಗೆ ಪ್ರಸ್ತುತ ಸಾಲಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಅಧಿಕೃತ ವೈದ್ಯಕೀಯ ಪ್ರಮಾಣ ಪತ್ರ, ಆಸ್ಪತ್ರೆಯ ಖರ್ಚು ವೆಚ್ಚದ ಬಿಲ್ಲುಗಳು, ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳು, ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಪ್ರತಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು. ನಿಗದಿತ ಅವಧಿ ನಂತರ ಸಲ್ಲಿಕೆಯಾಗುವ ಹಾಗೂ ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಕೊಪ್ಪಳ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular