
ಸ್ವಯಂ ಉದ್ಯೋಗ(ನೇರ ಸಾಲ) ಯೋಜನೆ, ಉದ್ಯಮಶೀಲತಾ ಯೋಜನೆ(2.00 ಲಕ್ಷ ಮತ್ತು 4.00 ಲಕ್ಷ), ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನತೆಗೆ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ: 30-11-2023 ಕಡೆಯ ದಿನವಾಗಿದೆ. ಆಸಕ್ತರು ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಗ್ರಾಮ ಒನ್ಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

