HomeKarnatakaGOOD NEWS : ರಾಜ್ಯ ಸರ್ಕಾರದಿಂದ SC/ST ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 'ಪ್ರೋತ್ಸಾಹ...

GOOD NEWS : ರಾಜ್ಯ ಸರ್ಕಾರದಿಂದ SC/ST ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ‘ಪ್ರೋತ್ಸಾಹ ಧನ’ 2 ಲಕ್ಷಕ್ಕೆ ಹೆಚ್ಚಳ.!

ಬೆಂಗಳೂರು : ಐಐಟಿ, ಐಐಎಂ, ಐಐಎಸ್ಸಿ, ಎನ್ಐಟಿ ಯಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ರಿಂದ 2 ಲಕ್ಷಕ್ಕೆ ಹೆಚ್ಚಳ ಮಾಡಿ ಸರ್ಕಾರವು ಆದೇಶ ಹೊರಡಿಸಿದ್ದು, ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದ್ದಾರೆ.

ಇನ್ನು ಪಿಯುಸಿ ಪರೀಕ್ಷೆಯಲ್ಲಿ 95 ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂಪಾಯಿಗಳ ಶುಲ್ಕ ಧನವನ್ನು ಒದಗಿಸಲು ಸರ್ಕಾರ ತೀರ್ಮಾನಿಸಿದೆ.

ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ ಶೇ.60 ಗೂ ಹೆಚ್ಚಿನ ಅಂಕ ಪಡೆದು ಉತ್ತೀರ್ಣರಾದರೆ ಅವರಿಗೆ ಮತ್ತೆ 25 ಲಕ್ಷ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಮಹತ್ವದ ಘೋಷಣೆಯನ್ನು ಸರ್ಕಾರವು ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸ್ಸು ನನಸಾಗಲಿದೆ.
ಐಐಟಿ, ಐಐಎಂ ನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು, ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟçದ ನಿರ್ಮಾಣವಾಗಬೇಕು ಎಂದು ಸಚಿವರು ತಿಳಿಸಿದ್ದಾರೆ.

ಬಡತನದ ಬೇಗೆಗೆ ಸಿಲುಕಿ ಎಂಬಿಬಿಎಸ್ ಓದುವ ಬಯಕೆ ಇರುವಂತಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸರ್ಕಾರಿ ಕೋಟಾದಡಿ ಸೀಟು ಸಿಗದೇ ಅವರು ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿದ್ದರೆ, ಅಂತಹ ಪ್ರತಿಭಾವಂತ ಮಕ್ಕಳ ಶುಲ್ಕವನ್ನು ಸರ್ಕಾರ ಭರಿಸಲಿದ್ದು, ಇದಕ್ಕಾಗಿ ಆರಂಭಿಕವಾಗಿ 25 ಲಕ್ಷ ರೂಪಾಯಿಗಳನ್ನು ನೀಡುವ ನಿರ್ಧಾರವನ್ನು ತೆಗೆದುಕೊಂಡಿದೆ.

ಈಗಾಗಲೇ ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ನಮ್ಮ ಸರ್ಕಾರವು ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟುಕೊಂಡು ಮುಖ್ಯ ಘೋಷಣೆಯನ್ನು ಮಾಡಿದೆ.ಬಾಬಾ ಸಾಹೇಬರ ಆಶಯದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿ, ಶ್ರಮ ಹಾಕಿ ಓದಬೇಕೆಂದು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಆಶಯ ವ್ಯಕ್ತಪಡಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular