HomeKarnatakaSC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ಮೆಟ್ರಿಕ್ ಪೂರ್ವ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ / ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು https://ssp.karnataka.gov.in ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಎಸ್.ಕರಿಯಪ್ಪ ರಸ್ತೆ, ಕನಕಪುರ ಮುಖ್ಯ ರಸ್ತೆ, ಬನಶಂಕರಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ, ಅಥವಾ ದೂರವಾಣಿ ಸಂಖ್ಯೆ: 080-26711096 ಅನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular