HomeKarnatakaರಾಜ್ಯದ SC, ST ವರ್ಗದ ಯುವಕರಿಗೆ ಭರ್ಜರಿ ಗುಡ್‌ ನ್ಯೂಸ್‌ : ಉದ್ಯಮಶೀಲತಾ ತರಬೇತಿಗೆ ಅರ್ಜಿ...

ರಾಜ್ಯದ SC, ST ವರ್ಗದ ಯುವಕರಿಗೆ ಭರ್ಜರಿ ಗುಡ್‌ ನ್ಯೂಸ್‌ : ಉದ್ಯಮಶೀಲತಾ ತರಬೇತಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರು ಸ್ವಯಂ ಉದ್ಯೋಗ ಪ್ರಾರಂಭಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ಆಸಕ್ತರವರಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ. ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಜಾಹಿರಾತು ಮತ್ತು ಮಾರುಕಟ್ಟೆಯ ಕುರಿತು, ನೋಂದಣೆ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. ಇದಕ್ಕಾಗಿ ಕೊಪ್ಪಳ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭ್ಯರ್ಥಿಗಳು 21 ವರ್ಷ ದಿಂದ 50 ವರ್ಷ ವಯಸ್ಸಿನವರಾಗಿರಬೇಕು ಹಾಗೂ ವಿದ್ಯಾಭ್ಯಾಸವು ಪಿಯುಸಿ ಆಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗದ ಮಹಿಳಾ ಮತ್ತು ಪುರುಷರು ಮಾತ್ರ, ಆಸಕ್ತರು ಕೊನೆಯ ದಿನಾಂಕ 13-02-2023 ರ ಒಳಗಾಗಿ ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಛೇರಿ ಕೊಪ್ಪಳ ಆವರಣ, ನಗರಸಭೆ ಎದುರುಗಡೆ, ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರ, ರೇಶನ್ ಕಾರ್ಡ್‌ಗಳ ಕ್ಷೆರಾಕ್ಸ್ ಪ್ರತಿಗಳು, 2 ಪಾಸಪೋರ್ಟ್ ಫೋಟೋಗಳೊಂದಿಗೆ ಅರ್ಜಿಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 6362681190/6362557332 ಈ ನಂಬರಿಗೆ ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು, ಸಿಡಾಕ್ ಕೊಪ್ಪಳ, ಇವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular