ಪರಿಶಿಷ್ಟ ಜಾತಿಯ ಮೀನು ಕೃಷಿಕರಿಗೆ ಗುಡ್‌ ನ್ಯೂಸ್‌ : ಕೃಷಿ ಕೊಳ ನಿರ್ಮಾಣಕ್ಕೆ4.40 ಲಕ್ಷ ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಜಿಲ್ಲಾ ವಲಯ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಯೋಜನೆಯಡಿ ಪರಿಶಿಷ್ಟ ಜಾತಿಯ ಮೀನು ಕೃಷಿಕರು ಮೀನು ಕೃಷಿ ಕೊಳ ನಿರ್ಮಾಣ ಮಾಡಲು 4.40 ಲಕ್ಷ ರೂ. ಹಣ (ಒಂದು ಹೆಕ್ಟೇರ್ ಕೊಳಕ್ಕೆ) ಸಹಾಯಧನ ನೀಡಲಾಗುತ್ತದೆ.

ಅರ್ಹ ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ https://ballari.nic.in/ ವೆಬ್‍ಸೈಟ್‍ಗೆ ಭೇಟಿ ನೀಡಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲೂ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮೊ.8970754167 ಮತ್ತು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರ ಮೊ.9449593156 ಗೆ ಸಂಪರ್ಕಿಸಬೇಕೆಂದು ಎಂದು ಮೀನುಗಾರಿಕೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read