HomeKarnatakaರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 100 ಹೊಸ ಹಾಸ್ಟೆಲ್ ನಿರ್ಮಾಣಕ್ಕೆ ಕ್ರಮ

ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 100 ಹೊಸ ಹಾಸ್ಟೆಲ್ ನಿರ್ಮಾಣಕ್ಕೆ ಕ್ರಮ

ಬೆಂಗಳೂರು : ರಾಜ್ಯದ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಚಿವ ಶಿವರಾಜ್‌ ತಂಗಡಗಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 100 ಹೊಸ ಹಾಸ್ಟೆಲ್‌ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಜಿಲ್ಲಾ ಕೇಂದ್ರಗಳಿಗೆ ಸುತ್ತಮುತ್ತಲಿನ ತಾಲೂಕು, ಹೋಬಳಿಗಳಿಂದ ವಿದ್ಯಾರ್ಥಿಗಳು ವ್ಯಾಸಾಂಗಕ್ಕಾಗಿ ತೆರಳುತ್ತಿದ್ದಾರೆ. ಹಾಗಾಗಿ ಜಿಲ್ಲಾ ಕೇಂದ್ರಗಳಲ್ಲಿ ಹಾಸ್ಟೆಲ್‌ ಕೊರತೆ ಇದ್ದು, 100 ಹೊಸ ಹಾಸ್ಟೆಲ್‌ ನಿರ್ಮಾಣ ಸಂಬಂಧ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದೆಲ್ಲೆಡೆ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಜಿಲ್ಲಾ ಕೇಂದ್ರಗಳತ್ತ ಮುಖ ಮಾಡುತ್ತಿದ್ದು, ವಿದ್ಯಾರ್ಥಿನಿಲಯಗಳ ಕೊರತೆ ಇದೆ. ಹಾಗಾಗಿ ಈ ಕೊರತೆ ನೀಗಿಸಿ, ಕಲಿಯುವ ಮಕ್ಕಳಿಗೆ ನೆರವಾಗುವ ದೃಷ್ಟಿಯಿ೦ದ ಹೊಸದಾಗಿ 100 ಹಾಸ್ಟೆಲ್‌ಗಳನ್ನು ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular