HomeKarnatakaರಾಜ್ಯ ಸರ್ಕಾರದಿಂದ 'ಶಾಲಾ ಮಕ್ಕಳಿಗೆ' ಗುಡ್ ನ್ಯೂಸ್: ಇಂದಿನಿಂದ 'ರಾಗಿ ಮಾಲ್ಟ್ ಮಿಶ್ರಿತ ಹಾಲು' ವಿತರಣೆ

ರಾಜ್ಯ ಸರ್ಕಾರದಿಂದ ‘ಶಾಲಾ ಮಕ್ಕಳಿಗೆ’ ಗುಡ್ ನ್ಯೂಸ್: ಇಂದಿನಿಂದ ‘ರಾಗಿ ಮಾಲ್ಟ್ ಮಿಶ್ರಿತ ಹಾಲು’ ವಿತರಣೆ

ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇಂದಿನಿಂದ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್‌ ಮಿಶ್ರಿತ ಹಾಲು ನೀಡುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಶಿಕ್ಷಣ ಸಚಿವ ಮಧುಬಂಗಾರಪ್ಪ, ರಾಜ್ಯ ಸರ್ಕಾರದ ಕ್ಷೀರಭಾಗ್ಯ ಯೋಜನೆಯಡಿ ಪ್ರಸ್ತುತ ವಾರದಲ್ಲಿ ಐದು ದಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಕೆನೆಭರಿತ ಹಾಲು ನೀಡಲಾಗುತ್ತಿದೆ. ಇನ್ಮುಂದೆ ವಾರದಲ್ಲಿ ಮೂರು ದಿನ ನಿರ್ದಿಷ್ಟ ಪ್ರಮಾಣದ ರಾಗಿ ಮಾಲ್ಟ್‌ ಮಿಶ್ರಣ ಮಾಡಿ ಕೊಡಲಾಗುತ್ತದೆ. ಉಳಿದ ಎರಡು ದಿನ ಹಾಲನ್ನು ಮಾತ್ರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ.ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಜೂನ್​ 06ರ ವರೆಗೆ ನಡೆಯಲಿವೆ ಎಂದು ಮಾಹಿತಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular