HomeLive Newsಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಿಜ್ಞಾನ ಕಲಿಕೆ ಉತ್ತೇಜಿಸಲು ವಸತಿ ಶಾಲೆಗಳಲ್ಲಿ ಇನ್ನೊವೇಶನ್‌ ಲ್ಯಾಬ್‌ ಸ್ಥಾಪನೆ

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ವಿಜ್ಞಾನ ಕಲಿಕೆ ಉತ್ತೇಜಿಸಲು ವಸತಿ ಶಾಲೆಗಳಲ್ಲಿ ಇನ್ನೊವೇಶನ್‌ ಲ್ಯಾಬ್‌ ಸ್ಥಾಪನೆ

ಬೆಂಗಳೂರು: ಶಾಲಾ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕುರಿತು ಆಸಕ್ತಿ ಮೂಡಿಸಲು ಹಾಗೂ ಪ್ರಾತ್ಯಕ್ಷಿಕೆ, ಚಟುವಟಿಕೆಗಳ ಮೂಲಕ ವಿಜ್ಞಾನ ಕಲಿಕೆ ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ 60 ಕ್ಕೂ ಹೆಚ್ಚು ವಸತಿ ಶಾಲೆಗಳಲ್ಲಿ ಇನ್ನೊವೇಶನ್‌ ಲ್ಯಾಬ್‌ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳನ್ನು ಆಯ್ಕೆ ಮಾಡಿಕೊಳ್ಳಲು ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯಾದ್ಯಂತ ನೆಹರು ಸ್ಟ್ರೀಮ್ ಲ್ಯಾಬ್‌ ಗಳು ಹಾಗೂ ಇನೋವೇಷನ್ ಲ್ಯಾಬ್‌ ಗಳನ್ನು ಸ್ಥಾಪಿಸಲಾಗುತ್ತಿದೆ. ಅಲ್ಲದೇ, ಕಲ್ಯಾಣ ಕರ್ನಾಟಕ ಪ್ರದೇಶದ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಕಲ್ಯಾಣ ಕರ್ನಾಟಕ ಸ್ಥಳೀಯ ಅಭಿವೃದ್ಧಿ ನಿಗಮ(KKRDB) ಸಹಯೋಗದಲ್ಲಿ ನೆಹರು ಸ್ಟ್ರೀಮ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುತ್ತಿದೆ. 2025–26ನೇ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನದ 6 ಕೋಟಿ ರೂಪಾಯಿಯಡಿ 60 ವಸತಿ ಶಾಲೆಗಳಲ್ಲಿ ಇನೋವೇಷನ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular