HomeLatest Newsಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮಹನೀಯರ ಜೀವನ ಚರಿತ್ರೆ ಕಿರು ಹೊತ್ತಿಗೆ ವಿತರಣೆ

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮಹನೀಯರ ಜೀವನ ಚರಿತ್ರೆ ಕಿರು ಹೊತ್ತಿಗೆ ವಿತರಣೆ

ಬೆಂಗಳೂರು: ಮಹನೀಯರ ಜಯಂತಿಯ ಮಹತ್ವ ಮತ್ತು ಅವರ ಜೀವನ ಚರಿತ್ರೆ ಕುರಿತಾದ ಕಿರು ಹೊತ್ತಿಗೆಗಳನ್ನು ಶಾಲೆಗಳಲ್ಲಿ ಮಕ್ಕಳಿಗೆ ವಿತರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಡಾ. ಧನಂಜಯ ಸರ್ಜಿ, ಕಿರು ಹೊತ್ತಿಗೆ ವಿತರಣೆ ಬಗ್ಗೆ ಮನವಿ ಮಾಡಿದ್ದು, ಇದಕ್ಕೆ ಸ್ಪಂದಿಸಿದ ಸಚಿವ ಶಿವರಾಜ್ ತಂಗಡಗಿ, ಸರ್ಕಾರದ ವತಿಯಿಂದ ಶಾಲೆಗಳಲ್ಲಿ ಮಹನೀಯರ ಜಯಂತಿಯ ಮಹತ್ವ ಮತ್ತು ಅವರ ಜೀವನ ಚರಿತ್ರೆ ಕುರಿತದ ಕಿರು ಹೊತ್ತಿಗೆ ವಿತರಿಸಲಾಗುವುದು. ಶಿಕ್ಷಣ ಇಲಾಖೆಯೊಂದಿಗೆ ಚರ್ಚಿಸಿ ಇದನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಸದಸ್ಯರು ಉತ್ತಮ ಸಲಹೆ ನೀಡಿದ್ದಾರೆ. ಮಹನೀಯರ ಕುರಿತಾಗಿ ಇಂದಿನ ಪೀಳಿಗೆಗೆ ತಿಳಿಸಿಕೊಡುವ ಅಗತ್ಯವಿದ್ದು, ಅವರ ಸಲಹೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಶಿಕ್ಷಣ ಇಲಾಖೆಯ ಜತೆ ಚರ್ಚಿಸಿ ಅನುಷ್ಠಾನಗೊಳಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular