ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್ : ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಕಂಪ್ಲಿ ಪುರಸಭೆ ವ್ಯಾಪ್ತಿಯಲ್ಲಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ಸ್ವಸಹಾಯ ಸಂಘಗಳಿಗೆ ಸಹಾಯಧನ ಒದಗಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 15 ಫಲಾನುಭವಿಗಳ ಗುರಿ ನಿಗದಿಪಡಿಸಲಾಗಿದ್ದು, ಬ್ಯಾಂಕ್ ವಿಧಿಸುವ ಶೇ.07ರ ಮೇಲ್ಪಟ್ಟು ಶೇಕಡವಾರು ಬಡ್ಡಿ ಮೊತ್ತವನ್ನು (ಬಡ್ಡಿಸಹಾಯಧನ) ಈ ಯೋಜನೆಯಿಂದ ಭರಿಸಲಾಗುತ್ತದೆ. ನಿಗಧಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ ನ.27ರೊಳಗಾಗಿ ಕಂಪ್ಲಿ ಪುರಸಭೆ ಕಚೇರಿಗೆ ಸಲ್ಲಿಸಬೇಕು.

ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ಕಾರ್ಡ್, ಯೋಜನಾ ವರದಿ, ಪಾಸ್ಪೋರ್ಟ್ ಅಳತೆಯ ಎರಡು ಭಾವಚಿತ್ರಗಳು, ಸ್ವ-ಸಹಾಯ ಗುಂಪುಗಳ ಭಾವಚಿತ್ರ, ಗುಂಪಿಗೆ ಸಂಬಂಧಪಟ್ಟ ದಾಖಲೆ ಮತ್ತು ಯೋಜನಾ ವರದಿ ಪ್ರತಿಯನ್ನು ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಂಪ್ಲಿ ಪುರಸಭೆ ಕಚೇರಿಗೆ ಸಂಪರ್ಕಿಸಬಹುದು ಎಂದು ಪುರಸಭೆಯ ಮುಖ್ಯಾಧಿಕಾರಿ ಕೆ.ದುರುಗಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read