ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಪ್ರತಿ ಜಿಲ್ಲಾ ಕೇಂದ್ರದಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ

ಬೆಂಗಳೂರು : ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು,ಹಿರಿಯ ನಾಗರಿಕರ ಅನುಕೂಲಕ್ಕಾಗಿ ಜಿಲ್ಲಾ ಕೇಂದ್ರಗಳಲ್ಲಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯ ಒದಗಿಸಲು ಯೋಜನೆ ರೂಪಿಸಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದಡಿ ಒಂದೇ ಸೂರಿನಡಿ ಎಲ್ಲಾ ಸೌಲಭ್ಯಗಳು ಸಿಗುವಂತಾಗಬೇಕು ಎನ್ನುವುದು ನಮ್ಮ ಉದ್ದೇಶ. ಶೀಘ್ರದಲ್ಲೇ ಈ ಕುರಿತು ಯೋಜನೆ ಜಾರಿಗೊಳಿಸಲಾಗುವುದು. ತಂದೆ- ತಾಯಿ, ಹಿರಿಯರು ನಮಗೆ ಕಣ್ಣಿಗೆ ಕಾಣುವ ದೇವರು. ಹಿರಿಯ ನಾಗರಿಕರ ಯೋಗಕ್ಷೇಮ ಕೇಂದ್ರದಲ್ಲಿ ಅನೇಕ ನೂನ್ಯತೆಗಳಿವೆ. ಅವುಗಳಿಗೆ ಆದಷ್ಟು ಬೇಗ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

ತಂದೆ-ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳುವ ಜವಾಬ್ದಾರಿ ಇಂದಿನ ಯುವಪೀಳಿಗೆ ಮೇಲಿದೆ‌‌. ಹಿರಿಯ ಜೀವಗಳ ಮನಸ್ಸನ್ನು ನೋಯಿಸದೆ ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಈ ದೇಶ ರಾಮನ ದೇಶ, ಶ್ರವಣಕುಮಾರನ ದೇಶ, ತಂದೆ-ತಾಯಿಗಳಿಗೆ ಒಳ್ಳೆಯ ಮಕ್ಕಳಾಗಿ ಯುವ ಜನತೆ ಬೆಳೆಯಬೇಕು. ನಮ್ಮ ಸಂಸ್ಕೃತಿಯನ್ನು ಮರೆಯದೇ ಮುನ್ನಡೆಯಬೇಕು. ಅಲ್ಲದೆ, ತಂದೆ ತಾಯಿಗೆ ಯಾರು ಗೌರವ ಕೊಡುತ್ತಾರೊ ಅಂತಹವರು ಜೀವನದಲ್ಲಿ ಮುಂದೆ ಬರುತ್ತಾರೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read