ಹಿರಿಯ ನಾಗರಿಕರಿಗೆ ಗುಡ್‌ ನ್ಯೂಸ್‌ : ರಾಜ್ಯದ ಎಲ್ಲ ದೇವಾಲಯಗಳಲ್ಲಿ ನೇರ ಪ್ರವೇಶಕ್ಕೆ ಅವಕಾಶ

ಬೆಂಗಳೂರು : ರಾಜ್ಯ ಸರ್ಕಾರವು ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ (senior citizens) ಹಿಂದೂ ಧಾರ್ಮಿಕ ದೇವಾಲಯಗಳಲ್ಲಿ ನೇರವಾಗಿ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಹಿರಿಯ ನಾಗರಿಕರು ದೇವಾಲಯಕ್ಕೆ ಬಂದಾಗ ಅವರಿಗೆ ನೇರ ದರ್ಶನಕ್ಕೆ ಅವಕಾಶ ಮಾಡಿಕೊಡುವಂತೆ ಎಲ್ಲಾ ದೇವಾಲಯಗಳಿಗೂ ಸೂಚಿಸಲಾಗಿದೆ. ಹೀಗಾಗಿ ಭಕ್ತರು ಅಲ್ಲಿನ ಸಿಬ್ಬಂದಿಗಳಿಗೆ ಹೇಳಿ ಒಳ ಹೋಗಬಹುದು.

ಇತ್ತೀಚಿನ ದಿನಗಳಲ್ಲಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಿಗೆ ಆಗಮಿಸುತ್ತಿರುವ ಭಕ್ತಾಧಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಹಿರಿಯ ನಾಗರೀಕರಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟಕರವಾಗಿರುವುದರಿಂದ, 60 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ದರ್ಶನಕ್ಕೆ ತಪ್ಪದೇ ಅಗತ್ಯ ವ್ಯವಸ್ಥೆ  ಮಾಡಲು ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read