HomeKarnatakaಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ 'ಸಹಾಯ ಹಸ್ತ' ವೆಬ್ಸೈಟ್ ಪ್ರಾರಂಭ

ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ‘ಸಹಾಯ ಹಸ್ತ’ ವೆಬ್ಸೈಟ್ ಪ್ರಾರಂಭ

ಬೆಂಗಳೂರು : ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು,ಹಿರಿಯ ನಾಗರಿಕರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸಹಾಯ ಹಸ್ತ ವೈಬ್ ಸೈಟ್ ಪ್ರಾರಂಭಿಸಲು ಮುಂದಾಗಿದೆ. 

ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದು,  ಬೆಂಗಳೂರು ನಗರದ ಹಿರಿಯ ನಾಗರಿಕರ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಹಿನ್ನೆಲೆಯಲ್ಲಿ ಡಿಸಿಎಂ ಕಚೇರಿಯಲ್ಲಿ ‘ಸಹಾಯ ಹಸ್ತ’ ವೆಬ್‌ಸೈಟ್‌ ಪ್ರಾರಂಭಿಸಲಾಗುತ್ತದೆ. ವೆಬ್‌ಸೈಟ್‌ ಮೂಲಕ ಸಮಸ್ಯೆಗಳನ್ನು ತಿಳಿಸಬಹುದು. ವೆಬ್ ಸೈಟ್ ನಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳು ಕೆಲಸ ಮಾಡಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ನಿವಾರಣೆಗೆ ಪ್ರತ್ಯೇಕ ತಂಡ ಕೆಲಸ ಮಾಡಲಿದ್ದು, ಎಲ್ಲ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಪರಿಹಾರ ಕಲ್ಪಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಬ್ರ್ಯಾಂಡ್‌ ಬೆಂಗಳೂರು ಸಮ್ಮೇಳನದಲ್ಲಿ ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular