ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಣ್ಣ, ಅತೀ ಸಣ್ಣ, ಪರಿಶಿಷ್ಟ ಜಾತಿ, ಹಾಗೂ ಪರಿಶಿಷ್ಟ ಪಂಗಡದ ಅರ್ಹ ರೈತರು ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿಯಲ್ಲಿ ತೋಟಗಾರಿಕೆ ಬೆಳೆಗಳಾದ ವೀಳ್ಯದೆಲೆ, ತೆಂಗು, ಮಾವು, ಸಪೋಟ, ಸೀಬೆ, ಅಂಗಾಂಶ ಬಾಳೆ, ಪಪ್ಪಾಯ, ಕರಿಬೇವು, ಕಾಳುಮೆಣಸು, ಕೋಕೋ, ನೇರಳೆ, ಸೀತಾಫಲ, ಡ್ರಾಗನ್ ಪ್ರೋಟ್ಸ್, ಮಲ್ಲಿಗೆ, ಬೆಣ್ಣೆ, ಹಣ್ಣು, ಹಲಸು, ಗುಲಾಬಿ ಇತ್ಯಾದಿ ತೋಟಗಾರಿಕೆ ಬೆಳೆಗಳಿಗೆ ಅರ್ಜಿ ಸಲ್ಲಿಬಹುದು.
ಅರ್ಜಿ ಸಲ್ಲಿಸಲು ಡಿಸೆಂಬರ್ 30 ರೊಳಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಹರಿಹರ ಕಛೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ದಾವಣಗೆರೆ ಜಿ.ಪಂ) ತಿಳಿಸಿದ್ದಾರೆ.
