ಮಡಿಕೇರಿ: ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನೆ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಗುರುತಿಸಲು ಸರ್ಕಾರದ ನಿರ್ದೇಶನದಂತೆ ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಬಹುದು.
ಅಂಗನವಾಡಿ ಸಹಾಯಕಿ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾದ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ನಿಬಂಧನೆಗಳಿಗೆ ಒಳಪಟ್ಟು ಕಂದಾಯ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕೇಂದ್ರಗಳಿಗೆ ಅರ್ಜಿಯನ್ನು ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವೆಂಬರ್, 13 ರ ಸಂಜೆ 5.30 ಗಂಟೆಯೊಳಗೆ ಅಥವಾ ಮುಂಚಿತವಾಗಿ https://karnemakaone.kar.nic.in/abcd/ ನಲ್ಲಿ ಆನ್‍ಲೈನ್ ಮುಖಾಂತರ ಸಲ್ಲಿಸಲು ಸೂಚಿಸಿದೆ. ನಿಗದಿತ ಅವಧಿಯ ನಂತರ ಬಂದ ಅರ್ಜಿ ಸ್ವೀಕರಿಸಲಾಗುವುದಿಲ್ಲ ಎಂದು ಪೊನ್ನಂಪೇಟೆ ತಾಲ್ಲೂಕು ಸಮಗ್ರ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.
