HomeLatest NewsSSLC, ITI ಪಾಸಾದವರಿಗೆ ಗುಡ್ ನ್ಯೂಸ್ : 'HAL' ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

SSLC, ITI ಪಾಸಾದವರಿಗೆ ಗುಡ್ ನ್ಯೂಸ್ : ‘HAL’ ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು  :   ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್, ಬೆಂಗಳೂರು ಇವರ ವತಿಯಿಂದ 12 ತಿಂಗಳುಗಳ ಅಪ್ರೆಂಟಿಸ್(ಶಿಶಿಕ್ಷು) ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ.ಯೊಂದಿಗೆ ಐ.ಟಿ.ಐ. ವಿಭಾಗದ ಫಿಟ್ಟರ್, ಟರ್ನ್‍ರ್, ಮೆಷಿನಿಸ್ಟ್, ಎಲೆಕ್ಟ್ರಿಷಿಯನ್, ವೆಲ್ಡರ್, ಕಂಪ್ಯೂಟರ್ ಅಪರೇಟರ್ ಮತ್ತು ಪ್ರೋಗ್ರಾಮಿಂಗ್ ಆಸಿಸ್ಟೆಂಟ್, ಕಾರ್ಪೆಂಟರ್, ಪೌಂಡ್ರಿಮೆನ್, ಶೀಟ್ ಮೆಟಲ್‍ವರ್ಕರ್, ಟೂಲ್ ಅಂಡ್ ಡೈ ಮೇಕರ್, ಸಿಎನ್ ಸಿ ಪ್ರೋಗ್ರಾಮರ್ ಕಮ್ ಆಪರೇಟರ್, ಮೆಕಾನಿಕ್ ರೆಫ್ರಿಜರೇಷನ್ ಮತ್ತು ಏರ್ ಕಂಡಿಷ್ನಿಂಗ್ ಟ್ರೇಡ್ ನಲ್ಲಿ ತೇರ್ಗಡೆ ಹೊಂದಿರಬೇಕು. ತರಬೇತಿ ಅವಧಿಯಲ್ಲಿ ಸರ್ಕಾರಿ ನಿಯಮಾನುಸಾರ ಸ್ಟೈಫಂಡ್ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್, 25 ಕೊನೆಯ ದಿನವಾಗಿದೆ. ನಿಗದಿತ ಅರ್ಜಿ ನಮೂನೆಯೊಂದಿಗೆ ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಐಟಿಐ ಅಂಕಪಟ್ಟಿ, ಪ.ಜಾತಿ, ಪ.ಪಂಗಡ, ಓ.ಬಿ.ಸಿ, ಅಂಗವಿಕಲ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಎನ್‍ಟಿಸಿ. ಪ್ರಮಾಣಪತ್ರ ಮತ್ತು ಪಾಸ್ ಪೋರ್ಟ್ ಭಾವಚಿತ್ರ ಸಲ್ಲಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭ್ಯರ್ಥಿಯು https://apprenticeshipindia.gov.in/candidate-registration ಈ ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಮತ್ತು ನೋಂದಣಿ ಸಂಖ್ಯೆಯನ್ನು ಅರ್ಜಿಯಲ್ಲಿ ನಮೂದಿಸಬೇಕು.

ಹೆಚ್ಚಿನ ಮಾಹಿತಿಗೆ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಡಿಕೇರಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08272-225851, 9449692691 ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular