ಹಾಸನ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ಮತ್ತು ಆರ್‌ಬಿಎಲ್ ಫಿನ್‌ಸರ್ವ್ ಲಿಮಿಟೆಡ್(RBL FinServe Limited) ಹಾಗೂ ಟೀಮ್ ಲೀಸ್ ಸರ್ವೀಸಸ್ ಲಿಮಿಟೆಡ್(TeamLease Services Limited) ಸಂಸ್ಥೆಯ ಸಹಭಾಗಿತ್ವದಲ್ಲಿ ಉದ್ಯೋಗ ನೀಡುವ ಸಂಬಂಧ ಅ.30 ರಂದು ಬೆಳಿಗ್ಗೆ 10.30 ಗಂಟೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ರೈಲ್ವೇ ಸ್ಟೇಷನ್ ಹತ್ತಿರ, ಸರ್ಕಾರಿ ಐ.ಟಿ.ಐ. ಕಾಲೇಜು ಆವರಣ, ಹಾಸನ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೊಮಾ, ಪಿಯುಸಿ, ಯಾವುದೇ ಪದವಿ ಪಾಸಾದ ಪುರುಷ/ಮಹಿಳಾ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಈ ಮೂಲಕ ಕೋರಲಾಗಿದೆ.
ದೂರವಾಣಿ ಸಂಖ್ಯೆ : 08172-296374, 9743144950 ಹಾಗೂ 8722606874, ರವರನ್ನು ಕಚೇರಿ ವೇಳೆಯಲ್ಲಿ ಮಾತ್ರ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೊಗಾಧಿಕಾರಿಗಳು ತಿಳಿಸಿದ್ದಾರೆ.
