HomeKarnatakaಎಸ್ಎಸ್ಎಲ್ಸಿ ಪಾಸಾದವರಿಗೆ ಗುಡ್ ನ್ಯೂಸ್: ಹೆಚ್.ಎ.ಎಲ್.ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಎಸ್ಎಸ್ಎಲ್ಸಿ ಪಾಸಾದವರಿಗೆ ಗುಡ್ ನ್ಯೂಸ್: ಹೆಚ್.ಎ.ಎಲ್.ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಹೆಚ್.ಎ.ಎಲ್.(ಹಿಂದೂಸ್ತಾನ್ ಎರೋನಾಟಿಕಲ್ ಲಿಮಿಟೆಡ್) ನಲ್ಲಿ ಫೀಟ್ಟರ್, ಮೆಕಾನಿಕ್, ಟರ್ನರ್, ಎಲೆಕ್ಟ್ರೀಷಿಯನ್, ವೆಲ್ಡರ್, ಫೌಂಡ್ರಿ ಮೆನ್, ಟೂಲ್ ಅಂಡ್ ಡೈ ಮೇಕರ್, ಸಿಎನ್‍ಜಿ ಪ್ರೋಗ್ರಾಮರ್ ಕಮ್ ಆಪರೇಟರ್, ರೆಫ್ರಿಜಿರೇಟರ್ ಅಂಡ್ ಏರ್ ಕನ್‍ಡಿಷನರ್ ಮೆಕಾನಿಕ್, ಟ್ರೇಡ್‍ಗಳ ಅಪ್ರೆಂಟಿಸ್ ತರಬೇತಿ ಅರ್ಜಿ ಆಹ್ವಾನಿಸಲಾಗಿದೆ.

ಅಪ್ರೆಂಟಿಸ್ ತರಬೇತಿ ಒಂದು ವರ್ಷದ ಅವಧಿಯಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿ ಸಂಬಂಧಪಟ್ಟ ಟ್ರೇಡ್‍ಗಳಲ್ಲಿ ಐ.ಟಿ.ಐ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ಸ್ವ ದೃಢೀಕೃತ ರಿಸಲ್ಟ್ ಶಿಟ್, ಆಧಾರ್ ಮತ್ತು ಪಾನ್ ಕಾರ್ಡ್, ಜಾತಿ, ಅಂಗವಿಕಲರ, ಆರ್ಮಡ್ ಪರ್ಸನಲ್ ಪ್ರಮಾಣ ಪತ್ರಗಳು, ಎನ್.ಸಿ.ವಿ.ಟಿ. ಎಮ್.ಐ.ಎಸ್. ಪೋರ್ಟಲ್ ನೊಂದಣಿ ಪ್ರಮಾಣ ಪತ್ರ, 4 ಪೋಟೋ ಗಳೊಂದಿಗೆ  ವೆಬ್ ಸೈಟ್ https://apprenticeshipindia.gov.in ಅಥವಾ www.hal-india.com/career ನಲ್ಲಿ ಅರ್ಜಿ ಸಲ್ಲಿಸಬಹುದು.

ಸೆಪ್ಟೆಂಬರ್ 30 ಕಡೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9945587060, 7022459064, ಅಥವಾ 7019755147 ಸಂಪರ್ಕಿಸುವಂತೆ ಚಿತ್ರದುರ್ಗ ಜಿಲ್ಲಾ ಉದ್ಯೊಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular