HomeLatest Newsಎಸ್ಎಸ್ಎಲ್ಸಿ ಪಾಸಾದವರಿಗೆ ಗುಡ್ ನ್ಯೂಸ್: ಸ್ವಯಂ ಸೇವಕ ಗೃಹರಕ್ಷಕ ಸ್ಥಾನಗಳಿಗೆ ಅರ್ಜಿ ಆಹ್ವಾನ

ಎಸ್ಎಸ್ಎಲ್ಸಿ ಪಾಸಾದವರಿಗೆ ಗುಡ್ ನ್ಯೂಸ್: ಸ್ವಯಂ ಸೇವಕ ಗೃಹರಕ್ಷಕ ಸ್ಥಾನಗಳಿಗೆ ಅರ್ಜಿ ಆಹ್ವಾನ

ಹಾಸನ: ಜಿಲ್ಲೆಯ ಗೃಹರಕ್ಷಕದಳದ ಎಲ್ಲಾ ತಾಲ್ಲೂಕು ಹಾಗೂ ಉಪ ಘಟಕದಳದಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ ಗೌರವ ಸದಸ್ಯ ಸ್ಥಾನಗಳಿಗೆ ಅರ್ಹರಿರುವ ಹಾಗೂ ಸೇವಾ ಮನೋಭಾವ ಹೊಂದಿರುವ ಹಾಸನ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಛೆಯುಳ್ಳ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಉತ್ತೀರ್ಣತೆಯ ಅಂಕ ಪಟ್ಟಿಯ ದೃಢೀಕರಣ ಪ್ರತಿ, ಆಧಾರ್ ಕಾರ್ಡ್ ಪ್ರತಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ದೃಢೀಕೃತ ಪ್ರತಿಯನ್ನು ಹಾಸನ ಜಿಲ್ಲಾ ಗೃಹರಕ್ಷಕದಳದ ಕಚೇರಿಗೆ ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಕಚೇರಿ ವೇಳೆಯಲ್ಲಿ ಖುದ್ದಾಗಿ ಸಲ್ಲಿಸಿ ಕಚೇರಿಯಿಂದ ದಿನಾಂಕ: 01/12/2025 ರಿಂದ ಉಚಿತವಾಗಿ ಅರ್ಜಿಗಳನ್ನು ಪಡೆಯಬಹುದಾಗಿದೆ.

ಪೂರ್ಣ ಭರ್ತಿ ಮಾಡಿದ ಅರ್ಜಿಗಳನ್ನು ಕೆಳಗೆ ನಮೂದಿಸಿದ ಅಗತ್ಯ ಅಡಕಗೊಳೊಂದಿಗೆ ದಿನಾಂಕ:31/12/2025 ರ ಒಳಗಾಗಿ ಜಿಲ್ಲಾ ಗೃಹರಕ್ಷಕದಳದ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ. ಹಾಸನ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ ಘಟಕದಲ್ಲಿನ ಸದಸ್ಯ ಸ್ಥಾನಗಳಿಗೆ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿ ಸಲ್ಲಿಸಲು ಅರ್ಹತೆಗಳು:

ಕನಿಷ್ಟ 19 ರಿಂದ 50 ವರ್ಷದ ಒಳಗಿರಬೇಕು. ಎಸ್.ಎಸ್.ಎಲ್.ಸಿ., ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ತಮ್ಮ ವಾಸಸ್ಥಳದಿಂದ ಘಟಕಗಳಿಗೆ 6 ಕಿ.ಮೀ.ವ್ಯಾಪ್ತಿಯೊಳಗಿರಬೇಕು. ಅಭ್ಯರ್ಥಿಗಳು ಧೃಡಕಾಯರಾಗಿದ್ದು, ಆರೋಗ್ಯವಂತರಾಗಿರಬೇಕು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದೃಢೀಕೃತ ಪ್ರಮಾಣ ಪತ್ರಗಳು:

ಎಸ್.ಎಸ್.ಎಲ್.ಸಿ., ಉತ್ತೀರ್ಣತೆಯ ಅಂಕ ಪಟ್ಟಿ, ಜನ್ಮ ದಿನಾಂಕದ ದೃಢೀಕರಣದ ಪ್ರತಿ, ಆಧಾರ್ ಕಾರ್ಡ್ನ ಪ್ರತಿ, ಚುನಾವಣಾ ಗುರುತಿನ ಚೀಟಿಯ ಪ್ರತಿ, ವೈದ್ಯಕೀಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಬ್ಯಾಂಕ್ ಪಾಸ್ ಬುಕ್‌ನ ಪ್ರತಿ (ಎಸ್.ಬಿ.ಐ.,ಬ್ಯಾಂಕ್) ಕಡ್ಡಾಯ, ಪೋಲಿಸ್ ವೆರಿಫಿಕೇಶನ್(oಟಿಟiಟಿe).

ಹೆಚ್ಚಿನ ಮಾಹಿತಿಗಾಗಿ ಕಮಾಂಡೆಂಟ್, ಜಿಲ್ಲಾ ಗೃಹರಕ್ಷಕದಳದ ಕಾರ್ಯಲಯ, ಅಗ್ನಿಶಾಮಕ ಠಾಣಾ ಆವರಣ, ಡೈರಿ ವೃತ್ತ, ಹಾಸನ-573201, ದೂರವಾಣಿ ಸಂಖ್ಯೆ:08172-240690, ಶರತ್.ಎಸ್.ಜೆ(ಸಹಾಯಕ ಭೋದಕರು)-9731901436 ನ್ನು ಸಂಪರ್ಕಿಸಲು ಜಿಲ್ಲಾ ಗೃಹ ರಕ್ಷಕ ದಳದ ಕಮಾಂಡೆಂಟ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular